ಮಡಿಕೇರಿ, ಜೂ. ೫: ಮಡಿಕೇರಿ ತಾಲೂಕು ಪಶುವೈದ್ಯ ಆಸ್ಪತ್ರೆಯಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಾಯರ ಆರ್. ದಯಾನಂದ (೫೯) ಅವರು ಕೆ. ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಶಾಲೆಯಲ್ಲಿ ಕರ್ತವ್ಯಕ್ಕೆ ತೆರಳಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಡಿಕೇರಿ ಸಮೀಪದ ಮೇಕೇರಿಯ ನಿವಾಸಿಯಾಗಿರುವ ಕಾಯರ ಆರ್. ದಯಾನಂದ ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ತಾ. ೬ರಂದು (ಇಂದು) ಮಧ್ಯಾಹ್ನ ೧೨ ಗಂಟೆಗೆ ಸ್ವಗ್ರಾಮದಲ್ಲಿ ನಡೆಯಲಿದೆ.