ಮಡಿಕೇರಿ, ಜೂ. ೫: ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬೆಂ.ಮ.ಸಾ. ಸಂಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ (ಎಕ್ಸ್ಪ್ರೆಸ್) ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಕೆಲ ಷರತ್ತುಗಳೊಂದಿಗೆ ಜೂ.೧೧ ರಿಂದ “ಶಕ್ತಿ ಯೋಜನೆ”ಯನ್ನು ಜಾರಿಗೊಳಿಸಲು ಸಂಬAಧಿಸಿದ ಸಾರಿಗೆ ಸಂಸ್ಥೆಗಳಿಗೆ ನಿರ್ದೇಶನ ನೀಡಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
ಷರತ್ತುಗಳು:
* ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆಯು ಅನ್ವಯಿಸುತ್ತದೆ.
* ಐಷಾರಾಮಿ (ಲಕ್ಷÄರಿ) ಬಸ್ಗಳಾದ ರಾಜಹಂಸ, ನಾನ್-ಎ.ಸಿ. ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೆöÊ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ (ಲಕ್ಷÄರಿ) ಬಸ್ಗಳನ್ನು ಹೊರತುಪಡಿಸಿ) ಶೇ.೫೦ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು.
* ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.
* ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, “ಶಕ್ತಿ ಸ್ಮಾರ್ಟ್ ಕಾರ್ಡ್”ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು.
* “ಶಕ್ತಿ ಸ್ಮಾರ್ಟ್ ಕಾರ್ಡನ್ನು ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆÀಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಬೇಕು ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್.ಪುಷ್ಪ ಅವರು ಆದೇಶದಲ್ಲಿ ತಿಳಿಸಿದ್ದಾರೆ.