ಕುಶಾಲನಗರ, ಜೂ. ೬: ಉಚಿತ ವಿದ್ಯುತ್ ಯೋಜನೆ ಜಾರಿಗೆ ಹಲವು ಷರತ್ತು ವಿಧಿಸುವುದರೊಂದಿಗೆ ದಿಢೀರನೆ ಸರಕಾರ ವಿದ್ಯುತ್ ದರ ಏರಿಕೆ ಮಾಡಿರುವು sದನ್ನು ಖಂಡಿಸಿ ಕುಶಾಲನಗರ ನಗರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಚುನಾವಣೆ ಮುಂಚೆ ನೀಡಿದ ಗ್ಯಾರಂಟಿ ಯೋಜನೆಗಳು ಉಚಿತ ಎಂದು ಹೇಳಿದ್ದು ಇದೀಗ ಷರತ್ತು ವಿಧಿಸಲಾಗುತ್ತಿದೆ, ಜೊತೆಗೆ ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆದಿದೆ ಎಂದು ದೂರಿದರು. ಹಿರಿಯ ಮುಖಂಡರಾದ ಜಿ.ಎಲ್. ನಾಗರಾಜ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಪಕ್ಷದ ಪ್ರಮುಖರಾದ ಕೆ.ಜಿ. ಮನು, ಎಂ.ಡಿ. ಕೃಷ್ಣಪ್ಪ ಮಂಡೆಪAಡ ಬೋಸ್ ಮೊಣ್ಣಪ್ಪ, ಅಮೃತರಾಜ್, ರೂಪ ಉಮಾಶಂಕರ್, ಶೈಲ ಕೃಷ್ಣಪ್ಪ, ಎಂ.ಎA. ಚರಣ್, ವೈಶಾಕ್, ಮಧುಸೂದನ್, ಭಾಸ್ಕರ ನಾಯಕ್, ಸುಮನ್ ಚಂದ್ರಶೇಖರ್, ಗೀತಾ ಲಿಂಗಪ್ಪ, ಪ್ರದೀಪ್ ಮತ್ತಿತರ ಕಾರ್ಯಕರ್ತರು ಇದ್ದರು.