ಸುಂಟಿಕೊಪ್ಪ, ಜೂ. ೬: ಕೆಹೆಚ್‌ಪಿಟಿ ಹಾಗೂ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು. ಮಾದಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರದಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾನಸ ಚಾಲನೆ ನೀಡಿದರು.

ಸಮಾರಂಭವನ್ನು ಉದ್ದೇಶಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಮಾತನಾಡಿ ಗ್ರಾಮ ಆರೋಗ್ಯ ಯೋಜನೆ ಯಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ರಾಜ್ಯಾದ್ಯಂತ ಮೇ ೨೨ರಿಂದ ಜೂನ್ ೨೨ ರವರೆಗೆ ನಡೆಯಲಿದ್ದು ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾಗಿದೆ. ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯವನ್ನು ಕಾಪಾಡುವ ದಿಸೆಯಲ್ಲಿ ಜಾರಿ ತರಲಾಗಿದ್ದು ಯೋಜನೆಯ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳುವಂತೆ ಕರೆ ನೀಡಿದರು.

ಈ ಆರೋಗ್ಯ ಶಿಬಿರದಲ್ಲಿ ರಕ್ತದೊತ್ತಡ, ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹಿಮೋಗ್ಲೋಬಿನ್, ತೂಕ ಮತ್ತು ಎತ್ತರ ಹಾಗೂ ಚಿಕ್ಕ ಮಕ್ಕಳಿಗೆ ಪೌಷ್ಠಿಕ ತಪಾಸಣೆಗಳನ್ನು ಮಾಡ ಲಾಯಿತು. ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ನೆರೆದಿದ್ದು ಆರೋಗ್ಯ ತಪಾಸಣಾ ಶಿಬಿರದಲ್ಲಿ ತಪಾಸಣೆಗಳನ್ನು ನಡೆಸಿಕೊಂಡರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ನೇರೆದಿದ್ದ ಮಂದಿಯ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಿಶಾ, ಸಿಎಚ್‌ಒಗಳಾದ ಸಿಂಧು, ಮನೋಜ್ ಹಾಗೂ ಆಶಾ ಕಾರ್ಯಕರ್ತೆಯರು ಪರಿಶೀಲಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರುಗಳಾದ ಲತೀಫ್, ಅಂತೋನಿ, ನಿರೂಪ, ಸೋಮಣ್ಣ, ಬಿದ್ದಪ್ಪ, ಭಾಗೀರಥಿ, ಶೀಲಾ ಗೋಪಿ, ಗ್ರಾಮ ಪಂಚಾಯಿತಿ ಲೆಕ್ಕ ಸಹಾಯಕರಾದ ಅನಿತಾ ಹಾಗೂ ಸಿಬ್ಬಂದಿಗಳು ಇದ್ದರು.