ಸಿದ್ದಾಪುರ, ಜೂ. ೬: ದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಾಗಿ ನೆಲ್ಲಿಹುದಿಕೇರಿಯಲ್ಲಿ ಸಿಪಿಐ(ಎಂ) ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ಸಿಪಿಐ(ಎಂ) ಪಕ್ಷದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಮತ್ತು ಭರತ್‌ಕುಮಾರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ಪ್ರಮುಖರಾದ ಉದಯ ಕುಮಾರ್, ಶೌಕತ್ತಲಿ, ಶಿವರಾಮ, ಚಂದ್ರ, ಹಬೀಬ್, ಯೂಸಫ್, ಶಿವಪ್ಪ ನಾಯಕ್, ಜೋಸ್ ಇನ್ನಿತರರು ಹಾಜರಿದ್ದರು.