ಗೋಣಿಕೊಪ್ಪಲು, ಜೂ. ೭: ಅರಣ್ಯ ಇಲಾಖೆ ವತಿಯಿಂದ ತಿತಿಮತಿ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಧನುಗಾಲ, ಬಾಳಾಜಿ, ಮಾಯಮುಡಿ, ನೊಖ್ಯ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಮರಳಿ ಕಾಡಿಗಟ್ಟುವ ಕಾರ್ಯಾಚರಣೆ ಇದೇ ೮ ಮತ್ತು ೯ರಂದು ನಡೆಯಲಿದೆ.
ಈ ಕಾರ್ಯಾಚರಣೆ ನಡೆಯುವ ಸಂದರ್ಭದಲ್ಲಿ ಸಂಬAಧಿತ ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕರು, ಶಾಲಾ ಮಕ್ಕಳು, ವಯೋವೃದ್ಧರು ಎಚ್ಚರಿಕೆ ವಹಿಸಬೇಕಾಗಿದೆ. ಅಲ್ಲದೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಕಾರ್ಯಾಚರಣೆಗೆ ಸಂಬAಧಿಸಿದAತೆ ಪೂರ್ಣ ಸಹಕಾರ ನೀಡುವಂತೆ ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.