ಕೂಡಿಗೆ, ಜೂ. ೭: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಮತ್ತು ಸಾರ್ವಜನಿಕರಿಗಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮವು ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸಂತೆ ಮಾರುಕಟ್ಟೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಈ ತಪಾಸಣೆ ಶಿಬಿರ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ನೆರವೇರಿಸಿದರು. ಶಿಬಿರದಲ್ಲಿ ರಕ್ತದೊತ್ತಡ, ರಕ್ತದಲ್ಲಿ ಸಕ್ಕರೆಯ ಪ್ರಮಾಣ, ಹಿಮೋಗ್ಲೋಬಿನ್, ತೂಕ ಮತ್ತು ಎತ್ತರ ಹಾಗೂ ಚಿಕ್ಕ ಮಕ್ಕಳಿಗೆ ನ್ಯೂಟ್ರಿಷನ್ ತಪಾಸಣೆಗಳನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಸರ್ಕಾರ ಜನಸಾಮಾನ್ಯರ ಹಿತದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ, ಆ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಕೂಡ ತುಂಬಾ ಉತ್ತಮವಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಿದರು. ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.