ಇಡಿ ದಾಳಿ: ರೂ. ೧೦೦ ಕೋಟಿಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆ
ಬೆಂಗಳೂರು, ಜೂ. ೭: ಭಾರತ್ ಇನ್ಫಾçಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ ಲಿಮಿಟೆಡ್ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಆಸ್ತಿ ಮತ್ತು ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಭಾರತ್ ಇನ್ಫಾçಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ ಲಿಮಿಟೆಡ್ ವಿರುದ್ಧ ಬ್ಯಾಂಕ್ಗೆ ವಂಚನೆ ಪ್ರಕರಣ ಸಂಬAಧ ಎರಡು ಜಿಲ್ಲೆಗಳಲ್ಲಿ ಏಳು ಕಡೆ ಇಡಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ೧೦೦ ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ, ೧೪ ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಈ ವೇಳೆ ಅಧಿಕಾರಿಗಳು ಹಲವು ದಾಖಲೆಗಳು ಹಾಗೂ ಡಿಜಿಟಲ್ ಡಿವೈಸ್ಗಳನ್ನೂ ವಶಪಡಿಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬ್ಯಾಂಕ್ ಖಾತೆ ಮಾಹಿತಿ ಸಂಗ್ರಹಿಸಿ ಖಾತೆಯನ್ನು ಜಪ್ತಿ ಮಾಡಿದ್ದಾರೆ.
ಕ್ಯಾಂಪ್ನಲ್ಲಿ ಊಟ ಸೇವಿಸಿ ೩೫ ಮಂದಿ ಸೈನಿಕರು ಅಸ್ವಸ್ಥ
ಹಾಸನ, ಜೂ. ೭: ಮಧ್ಯಾಹ್ನದ ಊಟ ಸೇವಿಸಿದ ಬಳಿಕ ೩೫ ಸೈನಿಕರು ಅಸ್ವಸ್ಥಗೊಂಡಿದ್ದು ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯ ಕ್ಯಾಂಪ್ಗೆ ಸೈನಿಕರು ಚಾಲನಾ ತರಬೇತಿಗೆ ಬಂದಿದ್ದರು. ಮಧ್ಯಾಹ್ನ ಕ್ಯಾಂಪ್ನಲ್ಲೇ ತಯಾರಿಸಿದ್ದ ಆಹಾರ ಸೇವಿಸಿದ ಬಳಿಕ ೩೫ ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈನಿಕರನ್ನು ಭೇಟಿಯಾದ ಶಾಸಕ ಸಿಮೆಂಟ್ ಮಂಜು ಆರೋಗ್ಯ ವಿಚಾರಿಸಿದ್ದು ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಇಬ್ಬರು ಸಹೋದರಿಯರು ಸಜೀವ ದಹನ
ಆಗ್ರಾ, ಜೂ. ೭: ಶಾರ್ಟ್ ಸರ್ಕ್ಯೂಟ್ನಿಂದ ಮನೆಯ ಮೇಲ್ಛಾವಣಿಗೆ ಬೆಂಕಿ ತಗುಲಿ ಇಬ್ಬರು ಸಹೋದರಿಯರು ಸಜೀವ ದಹನವಾಗಿರುವ ಘಟನೆ ಆಗ್ರಾದ ಗ್ರಾಮವೊಂದರಲ್ಲಿ ಬುಧವಾರ ನಡೆದಿದೆ. ಆಗ್ರಾ ಜಿಲ್ಲೆಯ ಖೇರಘರ್ ಬ್ಲಾಕ್ನ ಕರ್ಹಕಿ ಗ್ರಾಮದ ಇಬ್ಬರು ಬಾಲಕಿಯರಾದ ಕನಕ್ (೩) ಮತ್ತು ವೀನೇಶ್ (೫) ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದು, ಅವರ ಆರು ತಿಂಗಳ ಕಿರಿಯ ಸಹೋದರ ಅಲೋಕ್ನನ್ನು ರಕ್ಷಿಸಲಾಗಿದೆ ಎಂದು ಬಸಾಯಿ ಜಾಗನೇರ್ ಪೊಲೀಸ್ ಠಾಣೆಯ ಅಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ. ಇಂದು ಮಧ್ಯಾಹ್ನ ೧೨ ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮಕ್ಕಳು ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಹೊಟ್ಟಿನಿಂದ ಮಾಡಿದ್ದ ಛಾವಣಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಘಟನೆ ಸಂಭವಿಸಿದೆ.
ಒಡಿಶಾದಲ್ಲಿ ಮತ್ತೊಂದು ಅಪಘಾತ: ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು
ಜಾಜ್ಪುರ, ಜೂ. ೭: ಒಡಿಶಾದ ಬಾಲಾಸೋರ್ನಲ್ಲಿ ೨೮೮ ಪ್ರಯಾಣಿಕರನ್ನು ಬಲಿ ಪಡೆದ ತ್ರಿವಳಿ ರೈಲು ದುರಂತ ಪ್ರಕರಣ ಸಂಭವಿಸಿ ಇನ್ನೂ ಒಂದು ವಾರ ಕಳೆದಿಲ್ಲ ಆದಾಗಲೇ ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ. ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾಜ್ಪುರ ರಸ್ತೆ ರೈಲು ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ. ಗೂಡ್ಸ್ ರೈಲು ಚಲಿಸಲು ಪ್ರಾರಂಭಿಸಿದಾಗ ಕಾರ್ಮಿಕರು ಅದರಡಿ ಭಾರೀ ಮಳೆಯಿಂದ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ದಿಢೀರನೆ ಗುಡುಗು ಸಹಿತ ಮಳೆಯಾಗಿದ್ದು, ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾಗ ರೈಲು ಚಲಿಸಲು ಪ್ರಾರಂಭಿಸಿದೆ. ಇದರಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರೈಲ್ವೆ ವಕ್ತಾರರು ಹೇಳಿದ್ದಾರೆ.