ಮಡಿಕೇರಿ, ಜೂ. ೭: ವೀರಾಜಪೇಟೆ ತಾಲೂಕು ಹಿರಿಯ ನಾಗರಿಕರ ವೇದಿಕೆ ಹಾಗೂ ವೀರಾಜಪೇಟೆಯ ತೂಕ್ ಬೊಳಕ್ ಕಲೆ ಕ್ರೀಡೆ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಕೊಡಗಿನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ ತಾ.೯ರಂದು ನಡೆಯಲಿದೆ.

ಅಪರಾಹ್ನ ೨ ಗಂಟೆಗೆ ವೀರಾಜಪೇಟೆಯ ಅಪ್ಪಚ ಕವಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಶಾಸಕರಾದ ಎ.ಎಸ್. ಪೊನ್ನಣ್ಣ, ಮಂಥÀರ್ ಗೌಡ ಹಾಗೂ ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಭಾಗವಹಿಸಲಿದ್ದಾರೆ. ನಂತರ ವೀರಾಜಪೇಟೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯರಾದ ನಾಯಡ ವಾಸು ನಂಜಪ್ಪ, ಖಾದರ್ ಭಾಷಾ, ಪುಲಿಯಂಡ ಪೊನ್ನಪ್ಪ ಶಾಸಕರುಗಳಿಗೆ ಆಶೀರ್ವಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಸಮಾಜಸೇವಕ ಸಂಕೇತ್ ಪೂವಯ್ಯ, ಹಿರಿಯ ನಾಗರಿಕರ ವೇದಿಕೆಯ ಮಾಜಿ ಅಧ್ಯಕ್ಷ ಬಿ.ಬಿ. ನಾಣಯ್ಯ, ನಿವೃತ್ತ ಕಂದಾಯ ಅಧಿಕಾರಿ ಮಾತಂಡ ಟಾಟಾ ಬೋಪಯ್ಯ, ಅವೆನ್ಯೂ ಸ್ಟೋರ್ ಮಾಲೀಕ ಹನೀಫ್, ಕೂತಂಡ ನಾಣಯ್ಯ, ಕಾಟಿಮಾಡ ಡಿಕ್ಕಿ ಅಣ್ಣಯ್ಯ, ಅಮೇರಿಕಾದ ನಿವೃತ್ತ ಪಶುವೈದ್ಯ ಕೊಕ್ಕಂಡ ಪೂಣಚ್ಚ, ಶಕ್ತಿ ದಿನಪತ್ರಿಕೆ ಸಂಪಾದಕರಾದ ಜಿ. ಚಿದ್ವಿಲಾಸ್, ಸಿದ್ದಾಪುರದ ಅಬ್ದುಲ್ ಮಜೀದ್, ವೀರಾಜಪೇಟೆ ಬಾರ್ ಅಸೋ ಸಿಯೇಶನ್ ಅಧ್ಯಕ್ಷ ಕೆ.ಜಿ. ಅಪ್ಪಣ್ಣ, ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತ, ಹಿರಿಯ ನಾಗರಿಕರ ವೇದಿಕೆಯ ಕಾರ್ಯದರ್ಶಿ ಪಾರುವಂಗಡ ಸನ್ನಿ ಮೊಣ್ಣಪ್ಪ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.