ಸೋಮವಾರಪೇಟೆ, ಜೂ. ೭: ಕರ್ನಾಟಕ ಜಾನಪದ ಪರಿಷತ್, ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ, ಜಿಲ್ಲಾ ರಕ್ತನಿಧಿ ಘಟಕದ ಸಹಯೋಗದೊಂದಿಗೆ ತಾ. ೮ ರಂದು (ಇಂದು) ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತದಾನ ಶಿಬಿರ ಆಯೋಜಿಸಲಾಗಿದ ಎಂದು ಪರಿಷತ್‌ನ ತಾಲೂಕು ಅಧ್ಯಕ್ಷ ಕೆ.ಎ. ಪ್ರಕಾಶ್ ತಿಳಿಸಿದ್ದಾರೆ.

ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಮಡಿಕೇರಿ ಜಿಲ್ಲಾ ರಕ್ತನಿಧಿ ಘಟಕದ ಸಿಬ್ಬಂದಿಗಳು ಆಗಮಿಸಿ ದಾನಿಗಳಿಂದ ರಕ್ತ ಸಂಗ್ರಹಿಸಲಿದ್ದಾರೆ. ಆಸಕ್ತ ರಕ್ತದಾನಿಗಳು ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ೯೯೬೪೯೪೪೯೭೮ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.