ವೀರಾಜಪೇಟೆ, ಜೂ. ೭: ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಗ್ರಾಮ ಪಂಚಾಯಿತಿ ಸದಸ್ಯರು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಡಿಕೇರಿ ತಾಲೂಕು ಹಾಕತ್ತೂರು ಗ್ರಾಮ ಪಂಚಾಯಿತಿ, ಹುಲಿತಾಳ ವಾರ್ಡಿನ ಸದಸ್ಯೆ ಶೀಲಾವತಿ ಬಿ.ಎಸ್. ಮತ್ತು ತೊಂಭತ್ತುಮನೆ ವಾರ್ಡಿನಿಂದ ಅಯ್ಕೆಗೊಂಡಿದ್ದ ಎನ್.ಎಸ್. ಶೈನಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಹಾಕತ್ತೂರು ವಲಯ ಅಧ್ಯಕ್ಷ ಪಿಯೂಷ್ ಪೆರೇರಾ, ಮುಖಂಡರಾದ ಮಂದ್ರೀರ ನಾಗೇಶ್, ನಾರಾಯಣ ಬಿ.ಕೆ. ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.