ಕೇಸ್‌ಗಳನ್ನು ಹಿಂಪಡೆದು ಒತ್ತುವರಿ ತೆರವಿಗೆ ಸಹಕರಿಸಿ: ಡಿಕೆಶಿ ಮನವಿ

ಬೆಂಗಳೂರು, ಜೂ. ೮: ರಾಜಕಾಲುವೆ ಒತ್ತುವರಿ ತೆರವಿಗೆ ಕೋರ್ಟ್ ನಿಂದ ಸ್ಟೇ ತಂದವರೆಲ್ಲರೂ ಕೇಸ್‌ಗಳನ್ನು ಹಿಂಪಡೆದು ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾಸಗಿ ಮಾಲೀಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಹೊಂದಿರುವ ಡಿ.ಕೆ. ಶಿವಕುಮಾರ್ ಅವರು ಇಂದು ಮೊದಲ ಬಾರಿಗೆ ನಗರ ಪ್ರದಕ್ಷಿಣೆ ನಡೆಸಿದರು. ಈ ವೇಳೆ ರಾಜಕಾಲುವೆಗಳನ್ನು ತಕ್ಷಣ ತೆರವು ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದ್ದರು. ದಿವ್ಯಶ್ರೀ ಅಪಾರ್ಟ್ ಮೆಂಟೇ ಇರಲಿ, ಶಿವಕುಮಾರ್ ಅಪಾರ್ಟ್ಮೆಂಟೇ ಇರಲಿ. ಯಾರೇ ರಾಜಕಾಲುವೆ ಒತ್ತುವರಿ ಮಾಡಿದರೂ ಅದನ್ನು ತೆರವುಗೊಳಿಸಬೇಕು. ಕೋರ್ಟ್ನಿಂದ ಸ್ಟೇ ತಂದವರು ತಾವಾಗಿಯೇ ತೆರವು ಮಾಡಿದರೆ ಒಳಿತು. ಇಲ್ಲದಿದ್ದರೆ ನಾವು ಸಹ ಕಾನೂನು ಮೂಲಕವೇ ತೆರವು ಕಾರ್ಯಾಚರಣೆ ನಡೆಸುತ್ತೇವೆ ಎಂದರು. ಅಧಿಕಾರಿಗಳೊಂದಿಗೆ ಸಹಕರಿಸಬೇಕು ಮತ್ತು ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ನಾನು ಮನವಿ ಮಾಡುತ್ತೇನೆ. ಇಲ್ಲದಿದ್ದರೆ ಸರ್ಕಾರವು ಕಾನೂನಿನ ಮೂಲಕ ಸಂಬAಧಿಸಿದ ಸೆಕ್ಷನ್‌ಗಳನ್ನು ಬಳಸಿ ರಾಜಕಾಲುವೆಗಳ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಎಚ್ಚರಿಸಿದ್ದಾರೆ.

‘ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ': ರಾಷ್ಟçಪತಿಗೆ ಮಹಿಳೆ ಪತ್ರ

ಚಿಕ್ಕಮಗಳೂರು, ಜೂ. ೮: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕದ ಮಹಿಳೆಯೊಬ್ಬರು ರಾಷ್ಟçಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ನಡದಲ್ಲಿಯೇ ಪತ್ರ ಬರೆದಿರುವ ಜಡೆಮ್ಮ ಎಂಬ ಭಕ್ತೆ ತನಗಾದ ಸಂಕಷ್ಟವನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣವನ್ನು ಖಚಿತಪಡಿಸಿಕೊಳ್ಳಬೇಕು. ರಾಷ್ಟçಪತಿ ದ್ರೌಪದಿ ಮುರ್ಮು ಅವರು ತಮ್ಮಂತಹ ಮಹಿಳೆಗೆ ಸ್ಫೂರ್ತಿ ಮತ್ತು ಆತ್ಮವಿಶ್ವಾಸದ ಸಂಕೇತ. ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಸೇರಿದಂತೆ ಎಲ್ಲಾ ಹಿಂದೂ ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ಬಾಬಾಬುಡನ್‌ಗಿರಿಯಲ್ಲಿ, ನಾನು ಪ್ರಕೃತಿಯ ಕರೆಗೆ ಹೋಗಬೇಕಾಯಿತು. ಅಲ್ಲಿ ನನಗೆ ಯಾವುದೇ ಶೌಚಾಲಯ ಕಾಣಿಸಲಿಲ್ಲ. ಶೌಚಾಲಯಕ್ಕಾಗಿ ಎಷ್ಟೇ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಹೊಸ ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ!

ಉಳ್ಳಾಲ (ದಕ್ಷಿಣಕನ್ನಡ), ಜೂ. ೮: ಹೊಸದಾಗಿ ಮನೆಯೊಂದನ್ನು ಖರೀದಿಸಿ ಐದು ದಿನಗಳ ಹಿಂದಷ್ಟೇ ಗೃಹಪ್ರವೇಶ ಮಾಡಿದ್ದ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಮಂಗಳವಾರ ನಡೆದಿದೆ. ೨೫ ವರ್ಷದ ಅಶ್ವಿನಿ ಬಂಗೇರ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನಿ ಒಂದೂವರೆ ತಿಂಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದರು. ಇನ್ನು ಮಂಗಳೂರು ಹೊರವಲಯದ ಕುಂಪಲದಲ್ಲಿ ಮನೆಯೊಂದನ್ನು ಖರೀದಿಸಿದ್ದರು. ಜೂನ್ ೩ ರಂದು ಗೃಹ ಪ್ರವೇಶ ಮಾಡಿದ್ದ ಅಶ್ವಿನಿ ತಾಯಿ ಮತ್ತು ಸಂಬAಧಿಕರ ಜೊತೆ ಅದೇ ಮನೆಯಲ್ಲಿ ವಾಸವಾಗಿದ್ದರು. ಆದರೆ ಗೃಹ ಪ್ರವೇಶ ಮಾಡಿದ ಐದು ದಿನದಲ್ಲೇ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶ್ವಿನಿ ಬರೆದಿರುವ ೨೪ ಪುಟಗಳ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿದ್ದು ಡೆತ್ ನೋಟ್‌ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿರುವುದಾಗಿ ಬರೆದಿದ್ದಾಳೆ. ಇದೇ ವೇಳೆ ತನಗೆ ಬ್ಯಾಂಕ್ ಅಧಿಕಾರಿಗಳು ಪೀಡಿಸುತ್ತಿರುವ ಬಗ್ಗೆ ತಿಳಿಸಿದ್ದಾಳೆ. ಈ ಸಂಬAಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್‌ಯುವಿ ಮೇಲೆ ಟ್ರಕ್ ಪಲ್ಟಿಯಾಗಿ ೭ ಮಂದಿ ಸಾವು

ಸಿಧಿ, ಜೂ. ೮: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಮೇಲೆ ಡಂಪರ್-ಟ್ರಕ್ ಪಲ್ಟಿಯಾಗಿ ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಡೋಲ್ ಗ್ರಾಮದ ಬಳಿಯ ಸಿಧಿ-ಟಿಕಾರಿ ರಸ್ತೆಯಲ್ಲಿ ಬೆಳಿಗ್ಗೆ ೯.೩೦ ರಿಂದ ೧೦ ಗಂಟೆಯ ನಡುವೆ ಅಪಘಾತ ಸಂಭವಿಸಿದೆ ಎಂದು ಸಿಧಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವೀಂದ್ರ ಸಿಂಗ್ ತಿಳಿಸಿದ್ದಾರೆ. ಡಂಪರ್-ಟ್ರಕ್ ಮೊದಲು ಎಸ್‌ಯುವಿಗೆ ಡಿಕ್ಕಿ ಹೊಡೆದು ನಂತರ ಅದರ ಮೇಲೆ ಪಲ್ಟಿ ಹೊಡೆದಿದೆ. ಪರಿಣಾಮವಾಗಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಲಿವ್-ಇನ್ ಸಂಗಾತಿಯ ಹತ್ಯೆ: ಬಂಧನ

ಮುAಬೈ, ಜೂ. ೮: ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್‌ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಮನೋಜ್ ಸಹಾನಿ (೩೬) ಕಳೆದ ಮೂರು ವರ್ಷಗಳಿಂದ ಗೀತಾ ನಗರ ೭ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ ೭೦೪ ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (೩೬) ಎಂಬುವವರೊAದಿಗೆ ವಾಸವಾಗಿದ್ದ. ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾನೆ. ಬುಧವಾರ ಸಂಜೆ ಫ್ಲಾಟ್‌ನ ಇತರ ಸದಸ್ಯರು ಮನೋಜ್‌ನ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿದ್ದುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ೩-೪ ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್‌ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ. ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್ ಮಾಡುವ ಮಿಷನ್‌ನಿಂದ ತುಂಡು ಮಾಡಲಾಗಿದೆ ಎಂದಿದ್ದಾರೆ. ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷö್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್‌ನಲ್ಲಿ ಬೇಯಿಸಿರಬಹುದು ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಹೇಳಿದ್ದಾರೆ.