ಚೆಟ್ಟಳ್ಳಿ: ಸಮೀಪದ ಕಂಡಕರೆ ಗಾಂಧಿ ಯುವಕ ಸಂಘದ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಲೆಯ ದೈಹಿಕ ಶಿಕ್ಷಕ ಹೆಚ್. ದಿನಕರ್ ಶೆಟ್ಟಿ, ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರವನ್ನು ಉಳಿಸಿದರೆ ಮಾತ್ರ ನಮಗೆ ಆರೋಗ್ಯವಾದ ಜೀವನ ನಡೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಗಾಂಧಿ ಯುವಕ ಸಂಘದ ಅಧ್ಯಕ್ಷ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಕನಿಷ್ಟ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ.

ಶಾಲೆಯ ಪರಿಸರವನ್ನು ಶುಚಿತ್ವದಿಂದಿಡುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು ಎಂದರು.

ಗಾAಧಿ ಯುವಕ ಸಂಘದಿAದ ಪರಿಸರದ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಧನುಪ್ರಕಾಶ್ ಎಂ.ಪಿ., ಸಹ ಶಿಕ್ಷಕಿ ಜನಿತ ಟಿ.ಪಿ., ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಶರೀಫ್ ಪಿ.ಎಂ., ಉಪಾಧ್ಯಕ್ಷ ಸವಾದ್ ಉಸ್ಮಾನ್, ಸದಸ್ಯರಾದ ಮುಬಶ್ಶೀರ್ ಹಾಗೂ ನೌಶೀರ್ ಇದ್ದರು.ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಮೀನಾ ದಿನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಹಲವು ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.*ಗೋಣಿಕೊಪ್ಪಲು: ವಿಶ್ವ ಪರಿಸರ ದಿನಚಾರಣೆ ಪ್ರಯುಕ್ತ ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ವಿವಿಧ ಜಾತಿಯ ಗಿಡಗಳನ್ನು ನೆಟ್ಟರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್.ಎಸ್. ಮಾದಯ್ಯ ಈ ಸಂದರ್ಭ ಮಾತನಾಡಿ, ಮಾನವನಿಗೆ ಪರಿಸರವು ಅತ್ಯಮೂಲ್ಯ ಕೊಡುಗೆಯನ್ನು ನೀಡಿದೆ. ಆದರೆ, ಪರಿಸರ ನಾಶಕ್ಕೆ ನಾವು ಕಾರಣರಾಗುತ್ತಿದ್ದೇವೆ. ಇದು ನಮ್ಮ ವಿನಾಶಕ್ಕೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ಪರಿಸರ ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಲೆಫ್ಟಿನೆಂಟ್ ಅಕ್ರಂ, ಕ್ಯಾಪ್ಟನ್ ಬ್ರೈಟಾಕುಮಾರ್, ಎಂ.ಕೆ. ಪದ್ಮಾ, ಎನ್.ಎಸ್. ಅಧಿಕಾರಿ ಕುಸುಮ್, ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಕೆಡೆಟ್‌ಗಳು ಇದ್ದರು.ಚೆಯ್ಯಂಡಾಣೆ: ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ದಿನಾಚರಣೆಯು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ, ಗಿಡವನ್ನು ನೆಟ್ಟರೆ ಸಾಲದು ಅದು ಬೆಳೆಯುವ ತನಕ ಅದನ್ನು ಪೋಷಿಸುವಂತಾಗಬೇಕೆAದರು. ಪ್ರತಿಯೊಬ್ಬರು ತಮ್ಮ ಶಾಲೆ ಮತ್ತು ಮನೆಯ ಸುತ್ತಮುತ್ತಲಿನ ವಠಾರಗಳಲ್ಲಿ ಗಿಡಗಳನ್ನು ನೆಟ್ಟು ಪರಿಸರವನ್ನು ಕಾಪಾಡಬೇಕು ಎಂದರು.

ಬಳಿಕ ಶಾಲೆಯ ವಠಾರ ಹಾಗೂ ತರಗತಿಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶುಭ ಹಾರೈಸಿದರು. ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ. ಹಾರಿಸ್ ದಿನದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಶಾಲಾ ವಠಾರದಲ್ಲಿ ವಿವಿಧ ತಳಿಯ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಶಾಲೆಯ ಪ್ರಬಾರ ಉಪ ಪ್ರಾಂಶುಪಾಲ ಎನ್.ಎಸ್. ಶಿವಣ್ಣ, ಶಾಲೆಯ ಉಪನ್ಯಾಸಕರು ಹಾಗೂ ಶಿಕ್ಷಕ ವೃಂದ, ಆಡಳಿತ ಮಂಡಳಿ ಸದಸ್ಯರು, ನಾಪೋಕ್ಲು ಠಾಣೆಯ ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.ಸುಂಟಿಕೊಪ್ಪ: ವಿಶ್ವ ಪರಿಸರ ದಿನದ ಅಂಗವಾಗಿ ಪೊಲೀಸ್ ಠಾಣೆ ಹಾಗೂ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡಲಾಯಿತು.

ಸೋಮವಾರದಂದು ಸುಂಟಿಕೊಪ್ಪ ಪೊಲೀಸ್ ಠಾಣೆ ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣಗಳಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀಶಾ ಮಾತನಾಡಿ, ಪರಿಸರ ಉಳಿವಿಗೆ ಕರೆ ನೀಡಿದರು.

ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ. ಶ್ರೀಧರ್, ಸರಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಆವರಣಗಳಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಎ.ಎಸ್.ಐ. ಶಿವಪ್ಪ ಹಾಗೂ ಸಿಬ್ಬಂದಿಗಳು, ಸರಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯರು ಉಪಸ್ಥಿತರಿದ್ದರು.ಶನಿವಾರಸಂತೆ: ವಿಶ್ವ ಪರಿಸರ ದಿನ ಅರ್ಥಪೂರ್ಣ ದಿನಾಚರಣೆಯಾಗಿದ್ದು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಜಾಗೃತಿ, ಕಾಳಜಿ ಮೂಡಿಸುವ ದಿನವಾಗಿದೆ ಎಂದು ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಹೇಳಿದರು.

ಸಮೀಪದ ಅಂಕನಹಳ್ಳಿ ಗ್ರಾಮದ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಊರುಡುವೆ ಜಾಗದಲ್ಲಿ ಶನಿವಾರಸಂತೆ ವಲಯ ಅರಣ್ಯ ಇಲಾಖೆ, ಮಲೆನಾಡು ರಕ್ಷಣಾ ಸೇನೆ ಹಾಗೂ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲಾ ಸಹಭಾಗಿತ್ವದಲ್ಲಿ ನಡೆದ ವಿಶ್ವ ಪರಿಸರ ದಿನ ಅಂಗವಾಗಿ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಕೃತಿಯ ಉಳಿವಿಗಾಗಿ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಮರವನ್ನು ಬೆಳೆಸಬೇಕು. ಬರಡಾಗುತ್ತಿರುವ ಭೂಮಿಯನ್ನು ಹಚ್ಚಹಸಿರಾಗಿಸಿದರೆ ಶುದ್ಧ ಗಾಳಿಯನ್ನು ಸವಿಯಬಹುದು. ಮನುಷ್ಯ ಹಾಗೂ ವನ್ಯಜೀವಿಗಳ ಅಳಿವು-ಉಳಿವು ಪ್ರಕೃತಿಯನ್ನೇ ಅವಲಂಬಿಸಿದೆ ಎಂದರು.

ಮಲೆನಾಡು ರಕ್ಷಣಾ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಕ್ಷಿತ್ ರವೀಂದ್ರಗೌಡ ಮಾತನಾಡಿ, ವಿಶ್ವ ಪರಿಸರ ದಿನವನ್ನು ಇಡೀ ವಿಶ್ವವೇ ಆಚರಿಸಿ ಸಂಭ್ರಮಿಸುತ್ತಿದೆ. ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಹಾಗೂ ಸಿಬ್ಬಂದಿ ಊರುಡುವೆ ಜಾಗದಲ್ಲಿ ವಿವಿಧ ಪ್ರಭೇದದ ಗಿಡಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಹಾಗೂ ಗ್ರಾಮಸ್ಥರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಹೇಮಂತ್ ಪ್ರಾಸ್ತಾವಿಕ ನುಡಿಯನ್ನಾಡಿದರು. ಶಿಕ್ಷಕರು, ಅರಣ್ಯ ಇಲಾಖೆಯ ಲೋಹಿತ್, ಜಯಕುಮಾರ್, ಶ್ರೀನಿವಾಸ್, ಹರೀಶ್, ಮಲೆನಾಡು ರಕ್ಷಣಾ ಸೇನೆಯ ಕಾರ್ಯಕರ್ತರಾದ ಕಿಶೋರ್, ಶ್ರೀಹನಿ, ಕಿರಣ್, ಉಮೇಶ್, ಪುನೀತ್, ಗ್ರಾಮಸ್ಥರು ಇದ್ದರು.

ಊರುಡುವೆ ಜಾಗದಲ್ಲಿ ವಿದ್ಯಾರ್ಥಿಗಳು ಅರಣ್ಯ ಇಲಾಖೆ ನೀಡಿದ ವಿವಿಧ ಜಾತಿಯ ೨೦ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.ಕುಶಾಲನಗರ: ಇಲ್ಲಿನ ಸರಕಾರಿ ಇಂಜಿನಿಯರಿAಗ್ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನಡೆಸಲಾಯಿತು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಮತ್ತು ಕಾಲೇಜಿನ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಇದ್ದರು.ಗೋಣಿಕೊಪ್ಪ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪಲುವಿನ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನದಲ್ಲಿ ಕೆ.ಪಿ.ಸಿ.ಸಿ. ರಾಜ್ಯ ವಕ್ತಾರ ಸಂಕೇತ್ ಪೂವಯ್ಯ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಸಮಾರೋಪ ಸಮಾರಂಭದಲ್ಲಿ ಚಿತ್ರ ಕಲೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರದಲ್ಲಿ ಶಿಕ್ಷಣ ಸಚಿವರು ಪರಿಸರದ ಬಗ್ಗೆ ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ನೀತಿ ಜಾರಿಗೊಳಿಸಬೇಕು.

ವರ್ಷಕ್ಕೆರಡು ಬಾರಿ ಪ್ರತಿ ವಿದ್ಯಾರ್ಥಿಗಳು ಪರಿಸರದ ನಡುವೆ ಕುಳಿತು ಸಮಯ ಕಳೆಯುವ ಮೂಲಕ ಪರಿಸರದ ಕಾಳಜಿ ಶಾಲಾ ದಿಗಳಲ್ಲಿಯೇ ಮಕ್ಕಳಲ್ಲಿ ಮೂಡಿಸುವಂತಾಗಬೇಕು. ಸರ್ಕಾರ ಈ ನಿಟ್ಟಿನಲ್ಲಿ ಪ್ರತಿ ಶಾಲಾ ಮಕ್ಕಳನ್ನು ವರ್ಷಕ್ಕೆರಡು ಬಾರಿ ಉಚಿತವಾಗಿ ಅರಣ್ಯ ಪ್ರದೇಶಕ್ಕೆ ಹಾಗೂ ವನ್ಯಜೀವಿ ಪ್ರದೇಶಕ್ಕೆ ಕರೆದೊಯ್ಯುವ ಕೆಲಸ ಮಾಡಬೇಕೆಂದು ತಿಳಿಸಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಶಾಂತಿ ಅಧ್ಯಕ್ಷತೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಶಾಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ ಚಿತ್ರ ಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ. ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿತ್ರಕಲಾ ಶಿಕ್ಷಕ ಸತೀಶ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ರಮಾನಂದ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಪಾಲ್ಗೊಂಡಿದ್ದರು.ಗೋಣಿಕೊಪ್ಪ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪಲುವಿನ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನದಲ್ಲಿ ಕೆ.ಪಿ.ಸಿ.ಸಿ. ರಾಜ್ಯ ವಕ್ತಾರ ಸಂಕೇತ್ ಪೂವಯ್ಯ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಸಮಾರೋಪ ಸಮಾರಂಭದಲ್ಲಿ ಚಿತ್ರ ಕಲೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರದಲ್ಲಿ ಶಿಕ್ಷಣ ಸಚಿವರು ಪರಿಸರದ ಬಗ್ಗೆ ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ನೀತಿ ಜಾರಿಗೊಳಿಸಬೇಕು.

ವರ್ಷಕ್ಕೆರಡು ಬಾರಿ ಪ್ರತಿ ವಿದ್ಯಾರ್ಥಿಗಳು ಪರಿಸರದ ನಡುವೆ ಕುಳಿತು ಸಮಯ ಕಳೆಯುವ ಮೂಲಕ ಪರಿಸರದ ಕಾಳಜಿ ಶಾಲಾ ದಿಗಳಲ್ಲಿಯೇ ಮಕ್ಕಳಲ್ಲಿ ಮೂಡಿಸುವಂತಾಗಬೇಕು. ಸರ್ಕಾರ ಈ ನಿಟ್ಟಿನಲ್ಲಿ ಪ್ರತಿ ಶಾಲಾ ಮಕ್ಕಳನ್ನು ವರ್ಷಕ್ಕೆರಡು ಬಾರಿ ಉಚಿತವಾಗಿ ಅರಣ್ಯ ಪ್ರದೇಶಕ್ಕೆ ಹಾಗೂ ವನ್ಯಜೀವಿ ಪ್ರದೇಶಕ್ಕೆ ಕರೆದೊಯ್ಯುವ ಕೆಲಸ ಮಾಡಬೇಕೆಂದು ತಿಳಿಸಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಶಾಂತಿ ಅಧ್ಯಕ್ಷತೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಶಾಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ ಚಿತ್ರ ಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ. ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿತ್ರಕಲಾ ಶಿಕ್ಷಕ ಸತೀಶ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ರಮಾನಂದ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಪಾಲ್ಗೊಂಡಿದ್ದರು.ಶನಿವಾರಸAತೆ: ವಿಶ್ವ ಪರಿಸರ ದಿನ ಅರ್ಥಪೂರ್ಣ ದಿನಾಚರಣೆಯಾಗಿದ್ದು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಜಾಗೃತಿ, ಕಾಳಜಿ ಮೂಡಿಸುವ ದಿನವಾಗಿದೆ ಎಂದು ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಹೇಳಿದರು.

ಸಮೀಪದ ಅಂಕನಹಳ್ಳಿ ಗ್ರಾಮದ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಊರುಡುವೆ ಜಾಗದಲ್ಲಿ ಶನಿವಾರಸಂತೆ ವಲಯ ಅರಣ್ಯ ಇಲಾಖೆ, ಮಲೆನಾಡು ರಕ್ಷಣಾ ಸೇನೆ ಹಾಗೂ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲಾ ಸಹಭಾಗಿತ್ವದಲ್ಲಿ ನಡೆದ ವಿಶ್ವ ಪರಿಸರ ದಿನ ಅಂಗವಾಗಿ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಕೃತಿಯ ಉಳಿವಿಗಾಗಿ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಮರವನ್ನು ಬೆಳೆಸಬೇಕು. ಬರಡಾಗುತ್ತಿರುವ ಭೂಮಿಯನ್ನು ಹಚ್ಚಹಸಿರಾಗಿಸಿದರೆ ಶುದ್ಧ ಗಾಳಿಯನ್ನು ಸವಿಯಬಹುದು. ಮನುಷ್ಯ ಹಾಗೂ ವನ್ಯಜೀವಿಗಳ ಅಳಿವು-ಉಳಿವು ಪ್ರಕೃತಿಯನ್ನೇ ಅವಲಂಬಿಸಿದೆ ಎಂದರು.

ಮಲೆನಾಡು ರಕ್ಷಣಾ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಕ್ಷಿತ್ ರವೀಂದ್ರಗೌಡ ಮಾತನಾಡಿ, ವಿಶ್ವ ಪರಿಸರ ದಿನವನ್ನು ಇಡೀ ವಿಶ್ವವೇ ಆಚರಿಸಿ ಸಂಭ್ರಮಿಸುತ್ತಿದೆ. ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಹಾಗೂ ಸಿಬ್ಬಂದಿ ಊರುಡುವೆ ಜಾಗದಲ್ಲಿ ವಿವಿಧ ಪ್ರಭೇದದ ಗಿಡಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಹಾಗೂ ಗ್ರಾಮಸ್ಥರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಹೇಮಂತ್ ಪ್ರಾಸ್ತಾವಿಕ ನುಡಿಯನ್ನಾಡಿದರು. ಶಿಕ್ಷಕರು, ಅರಣ್ಯ ಇಲಾಖೆಯ ಲೋಹಿತ್, ಜಯಕುಮಾರ್, ಶ್ರೀನಿವಾಸ್, ಹರೀಶ್, ಮಲೆನಾಡು ರಕ್ಷಣಾ ಸೇನೆಯ ಕಾರ್ಯಕರ್ತರಾದ ಕಿಶೋರ್, ಶ್ರೀಹನಿ, ಕಿರಣ್, ಉಮೇಶ್, ಪುನೀತ್, ಗ್ರಾಮಸ್ಥರು ಇದ್ದರು.

ಊರುಡುವೆ ಜಾಗದಲ್ಲಿ ವಿದ್ಯಾರ್ಥಿಗಳು ಅರಣ್ಯ ಇಲಾಖೆ ನೀಡಿದ ವಿವಿಧ ಜಾತಿಯ ೨೦ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.ಮಡಿಕೇರಿ: ಅಪ್ಪಂಗಳದ ಐಸಿಎಆರ್-ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ, ಪ್ರಾದೇಶಿಕ ಕೇಂದ್ರದ ವತಿಯಿಂದ ಸೋಮವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಹಣ್ಣಿನ ಮರದ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ವಿಜ್ಞಾನಿ ಡಾ. ಬಾಲಾಜಿ ರಾಜ್ ಕುಮಾರ್ ಮಾತನಾಡಿ, ಲೈಫ್ ಮಿಷನ್ ವಿಷಯದ ಕುರಿತು ವಿವರಿಸಿದರು ಹಾಗೂ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಹೆಚ್ಚು ಮರಗಳನ್ನು ನೆಡುವುದು, ನೈಸರ್ಗಿಕ ಸಂಪನ್ಮೂಲಗಳು ಮತ್ತು ಜಲಮೂಲಗಳ ಸಂರಕ್ಷಣೆಗೆ ಒತ್ತು ನೀಡುವಂತೆ ಕರೆ ನೀಡಿದರು.

ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು. ನಂತರ ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು ಬೆಟ್ಟಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸೇರಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು.ಮುಳ್ಳೂರು: ಸಮೀಪದ ಸರಕಾರಿ ಶಾಲೆಯಲ್ಲಿ ಸ್ಥಾಪಿತವಾಗಿರುವ ಫಲ ವೃಕ್ಷ ಕ್ರಾಂತಿ ಘಟಕದ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಪಕ್ಕದ ಕಾರ್ಗೋಡು ಮೀಸಲು ಅರಣ್ಯದಲ್ಲಿ ವಿವಿಧ ಹಣ್ಣಿನ ಬೀಜಗಳ ಬಿತ್ತನೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಲಾ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಮತ್ತು ಅಕ್ಕಪಕ್ಕದ ಮನೆಗಳಿಂದ ವಿವಿಧ ಹಣ್ಣಿನ ಬೀಜವನ್ನು ತಂದು ಶಾಲೆಯ ಬೀಜ ಸಂಗ್ರಹದಲ್ಲಿ ವರ್ಷಪೂರ್ತಿ ಸಂಗ್ರಹಿಸಿಡುತ್ತಾರೆ. ಏಪ್ರಿಲ್ ತಿಂಗಳಲ್ಲಿ ಮಣ್ಣಿನೊಳಗೆ ಬೀಜವನ್ನು ಸೇರಿಸಿ ಬೀಜುಂಡೆಯನ್ನಾಗಿ ಮಾಡಿಡುತ್ತಾರೆ. ಇವುಗಳನ್ನು ಪರಿಸರ ದಿನದಂದು ಪಕ್ಕದ ಅರಣ್ಯದಲ್ಲಿ ಬಿತ್ತನೆ ಮಾಡುತ್ತಾರೆ. ಕಳೆದ ೫ ವರ್ಷಗಳಿಂದ ಇದನ್ನು ನಡೆಸಿಕೊಂಡು ಬರುತ್ತಿದ್ದು, ಸೋಮವಾರ ನಡೆದ ವಿಶ್ವ ಪರಿಸರ ದಿನದ ಪ್ರಯುಕ್ತ ಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್. ಸತೀಶ್, ಸಹ ಶಿಕ್ಷಕ ಮಂಜುನಾಥ್ ನೇತೃತ್ವದಲ್ಲಿ ಶಾಲೆಯ ವಿದ್ಯಾರ್ಥಿಗಳು ಪಕ್ಕದ ಕಾರ್ಗೊಡು ಅರಣ್ಯದಲ್ಲಿ ಹಣ್ಣಿನ ಬೀಜಗಳನ್ನು ಬಿತ್ತನೆ ಮಾಡಿದರು. ಈ ಸಂದರ್ಭ ಎಸ್‌ಡಿಎಂಸಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಸAಪಾಜೆ ವಲಯ

ಕರಿಕೆ: ಮಡಿಕೇರಿ ವಿಭಾಗ ಸಂಪಾಜೆ ವಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಮಧುಸೂಧನ್, ಉಪವಲಯ ಅರಣ್ಯಾಧಿಕಾರಿಗಳಾದ ವಿಜೇಂದ್ರ ಕುಮಾರ್, ಎಂ. ಬಸವರಾಜಪ್ಪ ಹಾಗೂ ಸಿಬ್ಬಂದಿಗಳು ಮತ್ತು ಕೊಯನಾಡು ಶಾಲೆ ಶಿಕ್ಷಕರು, ವಿದ್ಯಾರ್ಥಿಗಳು, ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು. ನಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.ಕಡಂಗ: ವಿಶ್ವ ಪರಿಸರ ದಿನದ ಪ್ರಯುಕ್ತ ಗುಂಡಿಕೆರೆಯ ಎಸ್.ವೈ.ಎಸ್. ಮತ್ತು ಎಸ್.ಎಸ್.ಎಫ್. ಸಂಘಟನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕೊಡಗಿನ ಎಸ್.ವೈ.ಎಸ್. ಮತ್ತು ಎಸ್.ಎಸ್.ಎಫ್. ಕಾರ್ಯಕರ್ತರು ಹಲವಾರು ವರ್ಷಗಳಿಂದ ಇಂತಹ ಕಾರ್ಯಕ್ರಮ ಮಾಡುವುದರ ಮೂಲಕ ಪರಿಸರ ಪ್ರೇಮವನ್ನು ಮೆರೆದಿದ್ದಾರೆ ಎಂದು ವೀರಾಜಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷ ಕೂವಲೆರ ಫಾರೂಕ್ ಹೇಳಿದರು.

ಕಾರ್ಯಕ್ರಮದಲ್ಲಿ ಶಾಫೀ ಜುಮಾ ಮಸೀದಿಯ ಖತೀಬರಾದ ಇಲಿಯಾಸ್ ಅಂಝದಿ, ಮುಹದ್ದಿನ್ ಸಲೀಮ್ ಅಹ್ಸನಿ, ಮುಹಲ್ಲಿಂ ಜಾಪರ್ ಮಿಸ್ಬಾಹಿ, ಎಸ್.ಎಸ್.ಎಫ್. ಯೂನಿಟ್‌ನ ಅಧ್ಯಕ್ಷ ರಿಯಾಝ್ ಪಾಝಿಲಿ, ಬೇಟೋಳಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ರಫೀಕ್, ಉಮ್ಮಣಕಂಡ ಕೆ.ಸಿ.ಎಫ್. ಕಾರ್ಯಕರ್ತ ನಝೀರ್ ಹಾಜಿ, ನಿಝಾರ್ ಎಂ.ಯು., ಲತೀಫ್ ಸಿ.ಎ., ಜಿ.ಟಿ.ಯು. ಕಾರ್ಯದರ್ಶಿ ಹಂಝ ಮಕ್ಕಿತ್ತೋಟ, ಎಸ್‌ವೈಎಸ್ ಕಾರ್ಯದರ್ಶಿ ಉಬೈದ್ ಗೋಬಸ್, ಕಾರ್ಯಕರ್ತರಾದ ಶಾಹಿದ್ ಎಂ.ಹೆಚ್. ನರಿಕ್ಕೋಡಂಡ ಷಂಶುದ್ದೀನ್, ಸಲಾಂ ಮಾಟಿಲ್, ಸಪಾದ್ ಮುಟ್ಟಲ್, ಹಿರಿಯರಾದ ಸಮದ್, ಯೂಸುಫ್ ಮುಂತಾದವರು ಭಾಗವಹಿಸಿದ್ದರು.ಮುಳ್ಳೂರು: ಪಟ್ಟಣದ ತ್ಯಾಗರಾಜ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಾಗದಲ್ಲಿ ಉಪಯುಕ್ತ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಶಿಕ್ಷಕರಾದ ಬೋಜಪ್ಪ, ರಾಜಪ್ಪ, ಲತಾಮಣಿ, ಸುಧಾ, ಎಸ್‌ಡಿಎಂಸಿ ಪ್ರಮುಖರು ಪಾಲ್ಗೊಂಡಿದ್ದರು.ಕುಶಾಲನಗರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿ.ಪಿ. ಶಶಿಧರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಅಮೃತ ರಾಜ್, ಶಾಲೆಯ ಮುಖ್ಯೋಪಾಧ್ಯಾಯಿನಿ ಪುಷ್ಪ, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಚಂದ್ರಮೋಹನ್, ಕಾರ್ಯಕ್ರಮ ಆಯೋಜಕ ಕೆ.ಎಸ್. ಮೂರ್ತಿ ಮತ್ತಿತರರಿದ್ದರು.ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.

ಕಾವೇರಿ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಡಾ. ಮಾಳೇಟಿರ ಕಾವೇರಪ್ಪ, ಕಚೇರಿ ಅಧೀಕ್ಷಕಿ ಟಿ.ಕೆ. ಲತ, ಎನ್.ಎಸ್.ಎಸ್. ಅಧಿಕಾರಿಗಳಾದ ಎಂ.ಎನ್. ವನಿತ್ ಕುಮಾರ್, ಎನ್.ಪಿ. ರೀತಾ ಹಾಗೂ ಎನ್.ಎಸ್.ಎಸ್. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕುಶಾಲನಗರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಂ ನೇತೃತ್ವದಲ್ಲಿ ಆನೆಕಾಡು ಮತ್ತು ಅತ್ತೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ವಿವಿಧ ಮರಗಳ ಬೀಜ ಬಿತ್ತುವ ಕಾರ್ಯಕ್ರಮ ನಡೆಯಿತು.

ಇಲಾಖೆ ವತಿಯಿಂದ ತಯಾರಿಸಲಾದ ಸಾವಿರಾರು ಬೀಜದ ಉಂಡೆಗಳನ್ನು ಕಾಡ�