ಸಿದ್ದಾಪುರ, ಜೂ. ೭: ಕುಶಾಲನಗರದಿಂದ ಗೋಣಿಕೊಪ್ಪಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ. ವ್ಯಾಪ್ತಿಯ ದಾಸವಾಳದಲ್ಲಿ ರಸ್ತೆ ಮಧ್ಯೆ ಕಾಡುಕೋಣ ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ, ಗಾಬರಿಗೊಂಡ ಚಾಲಕನ ನಿಯಂತ್ರಣ ತಪ್ಪಿದ ಕಾರು ಸಮೀಪದ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿಯಿಂದ ತತ್ತರಿಸಿರುವ ಈ ವ್ಯಾಪ್ತಿಯ ಕಾಫಿ ಬೆಳೆಗಾರರು ಹಾಗೂ ಕೂಲಿಕಾರ್ಮಿಕರಿಗೆ ಇದೀಗ ಕಾಡುಕೋಣದಿಂದಾಗಿ ಇನ್ನಷ್ಟು ಆತಂಕಗೊAಡಿದ್ದಾರೆ. ಕಾರ್ಮಿಕರ ಭದ್ರತೆಯ ದೃಷ್ಟಿಯಿಂದ ಕೂಡಲೇ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.