ಮುಳ್ಳೂರು, ಜೂ. ೯: ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಆಲೂರು-ಸಿದ್ದಾಪುರ ಅರೆಭಾಷೆ ಗೌಡ ಸಮಾಜ ಹಾಗೂ ಕೊಡಗು ಅರೆಭಾಷೆ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಸಂಗಯ್ಯನಪುರ ಗ್ರಾಮದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಆಲೂರು-ಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೊಡಗು ಅರೆಭಾಷೆ ಗೌಡ ಫೆಡರೇಶನ್ ಅಧ್ಯಕ್ಷ ಸೂರ್ತಲೆ ಸೋಮಣ್ಣ, ನಿರ್ದೇಶಕ ಆನಂದ್ ಕರಂದ್ಲಾಜೆ, ಗೌಡ ಯುವ ವೇದಿಕೆ ಮಾಜಿ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಕುಶಾಲನಗರ ಅರೆಭಾಷೆ ಗೌಡ ಸಮಾಜ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಹರೀಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಆಲೂರು-ಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಹಾಜರಿದ್ದರು.