ಕೊಡ್ಲಿಪೇಟೆ, ಜೂ. ೮: ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಶೀಘ್ರದಲ್ಲೇ ಅಧಿಕಾರಿಗಳ ತಂಡವನ್ನೊಳಗೊAಡAತೆ ಕುಂದುಕೊರತೆ ಸಭೆ ಆಯೋಜಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ಶಾಸಕ ಡಾ. ಮಂಥರ್ ಗೌಡ ಹೇಳಿದರು. ಸಮೀಪದ ಬ್ಯಾಡಗೊಟ್ಟ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಹ್ಯಾಂಡ್ಪೋಸ್ಟ್ ಸರ್ಕಲ್‌ನಲ್ಲಿ ಏರ್ಪಡಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬ್ಯಾಡಗೊಟ್ಟ ಪಂಚಾಯಿತಿ ವ್ಯಾಪ್ತಿಯ ೩ ಬೂತ್‌ಗಳಲ್ಲಿ ತಮಗೆ ಅಧಿಕ ಮತಗಳು ಲಭಿಸಿವೆ ಎಂದು ಸ್ಮರಿಸಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.
ಬ್ಯಾಡಗೊಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷ ಸುಲೈಮಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ಸಿ.ಸಿ. ಸದಸ್ಯ ಯಾಕೂಬ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜೆ.ಆರ್. ಪಾಲಾಕ್ಷ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಮ್ಮ, ಮುಖಂಡರಾದ ಶಾಂತವೇರಿ ವಸಂತ್, ಕೊಡ್ಲಿಪೇಟೆ ವಲಯಾಧ್ಯಕ್ಷ ಔರಂಗಜೇಬ್, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಅವರುಗಳು ಮಾತನಾಡಿದರು.
ವೇದಿಕೆಯಲ್ಲಿ ಕೆ.ಪಿ.ಸಿ.ಸಿ. ವಕ್ತಾರ ಹೆಚ್.ಎಸ್. ಚಂದ್ರಮೌಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಜಿಲ್ಲಾ ಕಾರ್ಯದರ್ಶಿ ಜೆ.ಎಲ್. ಜನಾರ್ದನ್, ಗ್ರಾ.ಪಂ. ಅಧ್ಯಕ್ಷೆ ಲೀನಾ ಪರಮೇಶ್, ಉಪಾಧ್ಯಕ್ಷೆ ರೇಣುಕಾ ಮೇದಪ್ಪ, ಸದಸ್ಯರಾದ ಪಾವನ, ದೊಡ್ಡಯ್ಯ, ಹನೀಫ್, ಬೂತ್ ಅಧ್ಯಕ್ಷರುಗಳು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.