ಮಡಿಕೇರಿ, ಜೂ. ೯: ಲೋಕಾಯುಕ್ತ ಅಧಿಕಾರಿಗಳು ಜೂನ್ ೧೪ ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಹಾಗೂ ಜೂನ್ ೧೬ ರಂದು ಮಡಿಕೇರಿ ತಹಶೀಲ್ದಾರ್ ಕಚೇರಿಗಳಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಕೋರಿದ್ದಾರೆ.