ಗೋಣಿಕೊಪ್ಪಲು, ಜೂ. ೮: ವೀರಾಜಪೇಟೆ ಕಾವೇರಿ ಕಾಲೇಜು ಮತ್ತು ಮಂಗಳೂರು ಯೂನಿವರ್ಸಿಟಿ ಸಹಯೋಗದಲ್ಲಿ ಪೊನ್ನಂಪೇಟೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಅಂತರ ಕಾಲೇಜು ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾಲೇಜು ೫-೦ ಗೋಲುಗಳ ಅಂತರದಿAದ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ವೀರಾಜಪೇಟೆ ಕಾವೇರಿ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಮಹಿಳೆ ವಿಭಾಗದಲ್ಲಿ ಮೊದಲ ಸ್ಥಾನವನ್ನು ಆಳ್ವಾಸ್ ಮೂಡುಬಿದಿರೆ, ದ್ವಿತೀಯ ಸ್ಥಾನವನ್ನು ಗೋಣಿಕೊಪ್ಪ ಕಾವೇರಿ ಕಾಲೇಜು ಪಡೆಯಿತು.
ಪೊನ್ನಂಪೇಟೆಯ ಟರ್ಫ್ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ಮುಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸಾಕಷ್ಟು ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲುಬೇಕಾದ ಸೌಕರ್ಯ ಒದಗಿಸುವ ಪ್ರಯತ್ನ ಮಾಡಲಾಗು ವುದು ಎಂದು ಹೇಳಿದರು. ಕಾವೇರಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಇಟ್ಟಿರ ಕೆ. ಬಿದ್ದಪ್ಪ ಕ್ರೀಡೆಯ ಯಶಸ್ವಿನ ಬಗ್ಗೆ ಮಾತ ನಾಡಿದರು.
ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ, ಅಂರ‍್ರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ಪಿ. ತಿಮ್ಮಯ್ಯ, ವೀರಾಜಪೇಟೆ ಕಾವೇರಿ ಕಾಲೇಜು ಪ್ರಾಂಶುಪಾಲ ಬಿ.ಎನ್ ಶಂಕರ ನಾರಾಯಣ, ನಿವೃತ್ತ ಪ್ರಾಂಶುಪಾಲೆ ಕಮಲಾಕ್ಷಿ, ಎನ್.ಸಿ.ಸಿ. ಕಮಾಂಡಿAಗ್ ಆಫೀಸರ್ ಗಿಲ್ಬರ್ಟ್, ಡಾ. ಹೆರಾಲ್ಡ್ ಡಿಸೋಜ, ವೀರಾಜಪೇಟೆ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ, ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
- ಹೆಚ್.ಕೆ.ಜಗದೀಶ್