ಬ್ರಿಜ್ ಭೂಷಣ್ ವಿರುದ್ಧ ಜಗ್ಬೀರ್ ಹೇಳಿಕೆ
ನವದೆಹಲಿ, ಜೂ. ೯: ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ೨೦೧೩ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ನಾನು ನೋಡಿದ್ದೇನೆ ಎಂದು ಅಂರ್ರಾಷ್ಟಿçÃಯ ರೆಫರಿ ಜಗ್ಬೀರ್ ಸಿಂಗ್ ಅವರು ಹೇಳಿದ್ದಾರೆ. ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತ ಹಲವು ಅಗ್ರ ಕುಸ್ತಿಪಟುಗಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬ್ರಿಜ್ ಭೂಷಣ್ ಅವರನ್ನು ಬಂಧಿಸುವAತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. "ನಾನು ೨೦೦೭ ರಿಂದ ಯುಡಬ್ಲ್ಯುಡಬ್ಲ್ಯೂ ರೆಫರಿ ಆಗಿದ್ದೇನೆ ಮತ್ತು ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುವ ಮೊದಲೂ ನಾನು ರೆಫರಿಯಾಗಿದ್ದೇನೆ. ಬಹಳ ಹಿಂದಿನಿAದಲೂ ನನಗೆ ಬ್ರಿಜ್ ಭೂಷಣ್ ಗೊತ್ತು" ಎಂದು ಜಗ್ಬೀರ್ ತಿಳಿಸಿದ್ದಾರೆ. "ಬ್ರಿಜ್ ಭೂಷಣ್ ಹುಡುಗಿಯ ರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ನಾನು ನನ್ನ ಸ್ವಂತ ಕಣ್ಣುಗಳಿಂದ ನೋಡಿದ್ದೇನೆ. ಆದರೆ ಹುಡುಗಿಯರು ಆತನ ವಿರುದ್ಧ ದೂರುಗಳನ್ನು ದಾಖಲಿಸುವವರೆಗೆ ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಆ ದೃಶ್ಯಗಳನ್ನು ನೋಡಿ ನನಗೆ ಬೇಸರವಾಯಿತು" ಎಂದು ಅವರು ಹೇಳಿದ್ದಾರೆ. ೨೦೦೭ ರಿಂದ ಕೋಚ್-ಕಮ್-ಇಂಟರ್ನ್ಯಾಷನಲ್ ರೆಫರಿ ಆಗಿರುವ ಜಗಬೀರ್ ಅವರು, ಬ್ರಿಜ್ ಭೂಷಣ್ ಅವರ ದುರ್ವರ್ತನೆಯನ್ನು ಹಲವಾರು ಸಂದರ್ಭಗಳಲ್ಲಿ ತಾವು ನೋಡಿರುವುದಾಗಿ ತಿಳಿಸಿದ್ದಾರೆ. ಬ್ರಿಜ್ ಭೂಷಣ್ ಅಧ್ಯಕ್ಷರಾದ ನಂತರ ೨೦೧೩ ರಲ್ಲಿ ಕಝಾಕಿಸ್ತಾನ್ ಪ್ರವಾಸದ ಸಂದರ್ಭದಲ್ಲಿ ಅವರು ‘ನಾನು ನಿಮಗೆ ಇಂದು ಭಾರತೀಯ ಆಹಾರ ನೀಡುತ್ತೇನೆ' ಎಂದು ಹೇಳಿದರು ಮತ್ತು ಜೂನಿಯರ್ ಕುಸ್ತಿಪಟುಗಳ ಹೊಟೇಲ್ನಲ್ಲಿ ಪಾರ್ಟಿ ಮಾಡಿದರು. ಈ ವೇಳೆ ಬ್ರಿಜ್ ಭೂಷಣ್ ಮತ್ತು ಆತನ ಸಹಚರರು ಕುಡಿದು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಅದಕ್ಕೆ ನಾನೇ ಸಾಕ್ಷಿ ಎಂದು ರೆಫರಿ ಹೇಳಿದ್ದಾರೆ.
ಗೃಹಲಕ್ಷಿö್ಮ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ
ಬೆAಗಳೂರು, ಜೂ. ೯: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷಿö್ಮ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ಸೇರಿದಂತೆ ವಾಟ್ಸಾಪ್ನಲ್ಲಿ ಫಾರ್ಮ್ ಓಡಾಡ್ತಿರೋದು ಅಸಲಿಯಾಗಿದ್ದು ಅಂತಿಮವಾಗಿಲ್ಲ, ಕೆಲವೊಂದು ಬದಲಾವಣೆ ಮಾಡಲಿದ್ದೇವೆ ಎಂದು ಹೇಳಿದರು. ಈಗಾಗಲೇ ಅರ್ಜಿಯಲ್ಲಿ ಕೆಲವೊಂದು ಬದಲಾವಣೆಗೆ ಸಲಹೆ-ಸೂಚನೆಗಳು ಬಂದಿದ್ದು, ಉತ್ತಮ ಸಲಹೆಗಳನ್ನು ಮುಕ್ತವಾಗಿ ಅಳವಡಿಸಿಕೊಳ್ಳಲಾಗುವುದು. ಮುಖ್ಯವಾಗಿ ಫಲಾನುಭವಿಗಳ ಬ್ಯಾಂಕ್ ಪಾಸ್ ಬುಕ್ ಮಾಹಿತಿ ಸೇರಿಸಲಾಗುವುದು, ಜಾತಿ ಬದಲು ವರ್ಗ ಅಂತ ಹಾಕುತ್ತೇವೆ, ಸಂದೇಶ ತಪ್ಪಾಗಿ ಹೋಗಬಾರದು ಎಂದರು. ಗಂಡ ತೆರಿಗೆ ಕಟ್ಟೋದು ಮಾತ್ರ ಒಳಪಡುತ್ತೆ, ಮಗ ತೆರಿಗೆ ಕಟ್ಟೋದು ಅನ್ವಯ ಆಗಲ್ಲ, ಯೋಜನೆಯ ಫಲಾನುಭವಿಗಳು ಬಹುತೇಕ ಶೇ. ೯೦ ಬಿಪಿಎಲ್ ಕಾರ್ಡ್ನಲ್ಲಿ ಮಹಿಳೆಯರೇ ಪ್ರಮುಖ ಆಗಲಿದ್ದಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಿಗಬೇಕು ಮತ್ತು ಅವರನ್ನು ತಪ್ಪದೇ ಸೇರಿಸಲಾಗುತ್ತದೆ ಎಂದು ಹೇಳಿದರು. ಈ ಮಧ್ಯೆ ಗೃಹಲಕ್ಷ್ಮಿ ಯೋಜನೆ ಅತ್ಯಂತ ದೊಡ್ಡ ಪಿಂಚಣಿ ಯೋಜನೆಯಾಗಿದ್ದು, ಮಹಿಳಾ ಮತ್ತು ಮಕ್ಕಳ ಇಲಾಖೆ ಅಷ್ಟೊಂದು ಅಧಿಕಾರಿ, ಸಿಬ್ಬಂದಿ ಹೊಂದಿರದ ಕಾರಣಕ್ಕೆ ಕಂದಾಯ ಇಲಾಖೆ ವತಿಯಿಂದ ಸಹಕಾರ ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ರಾಜ್ಯದಲ್ಲಿ ಈಗಾಗಲೇ ಸುಮಾರು ೭೮ ಲಕ್ಷ ಜನ ವಿವಿಧ ರೀತಿಯ ಪಿಂಚಣಿ ಫಲಾನುಭವಿಗಳಿದ್ದಾರೆ. ವಿಧವೆಯರು, ವಿಶೇಷಚೇತನರು, ತೃತಿಯ ಲಿಂಗಿಗಳು ಸೇರಿದಂತೆ ಸುಮಾರು ೭೮ ಲಕ್ಷ ಜನರಿಗೆ ಪ್ರತಿವರ್ಷ ಪಿಂಚಣಿ ಲಭಿಸುತ್ತಿದೆ ಮತ್ತು ೧೦,೪೧೧ ಕೋಟಿ ರೂ. ಹಣ ಇಂತಹ ವಿವಿಧ ಪಿಂಚಣಿಗಳಿಗೆ ವೆಚ್ಚವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಸುಮಾರು ೧.೩ ಕೋಟಿಗೂ ಹೆಚ್ಚು ಅರ್ಜಿಗಳು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮೂವರು ಸಾವು
ಗುವಾಹಟಿ, ಜೂ. ೯: ಮಣಿಪುರದಲ್ಲಿ ಸ್ವಲ್ಪ ಸಮಯದ ನಂತರ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಕಾಂಗ್ಪೋಕ್ಪಿ ಜಿಲ್ಲೆ ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಗಡಿಯಲ್ಲಿರುವ ಖೋಕೆನ್ ಗ್ರಾಮದಲ್ಲಿ ಹಿಂಸಾಚಾರ ನಡೆದಿದೆ. ಅಪರಿಚಿತ ಬಂದೂಕುಧಾರಿಗಳ ಗುಂಪು ಗ್ರಾಮದ ಮೇಲೆ ಗುಂಡಿನ ದಾಳಿ ನಡೆಸಿದಾಗ, ಸ್ಥಳೀಯರು ತಕ್ಷಣ ಕೂಂಬಿAಗ್ ಕಾರ್ಯಾಚರಣೆ ನಡೆಸುತ್ತಿದ್ದ ಸೇನಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ ಸೇನೆ ಸ್ಥಳಕ್ಕೆ ಬರುವ ವೇಳೆಗೆ ಗುಂಡಿನ ದಾಳಿಯಲ್ಲಿ ಮೂವರು ಗ್ರಾಮಸ್ಥರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಜಂಗ್ಪಾವೊ ಟೌತಾಂಗ್, ಖೈಮಾಂಗ್ ಗೈಟ್ ಮತ್ತು ಡೊಮ್ಖೋಯ್ (ಮಹಿಳೆ) ಎಂದು ಗುರುತಿಸಲಾಗಿದೆ. ಗಾಯ ಗೊಂಡವರು ಥೋಂಗ್ನೆ ಮತ್ತು ತಂಗ್ಖೋಜಾAಗ್ ಎಂದು ಗುರುತಿಸಲಾಗಿದೆ. ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಜೂನ್ ೯ ರ ಬೆಳಿಗ್ಗೆ ಸೇನಾ ಸಮವಸ್ತ್ರದ ಧರಿಸಿ ಮತ್ತು ಸೇನಾ ವಾಹನಗಳನ್ನು ಬಳಸಿ ಮೈಟೆಯ್ ಉಗ್ರಗಾಮಿಗಳು ಖೋಕೆನ್ ಗ್ರಾಮದ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಐಟಿಎಲ್ಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂಸಾ ಚಾರದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂರನೆ ಗಾಯಾಳು ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲೋಕಸಭಾಧ್ಯಕ್ಷ-ರಾಜ್ಯಸಭೆ ಸಭಾಪತಿ ಭೇಟಿಯಾದ ಖಾದರ್
ನವದೆಹಲಿ, ಜೂ. ೯: ಇತ್ತೀಚೆಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಸೌಹಾದರ್ಯುತವಾಗಿ ಭೇಟಿಯಾಗಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಲೋಕಸಭಾಧ್ಯಕ್ಷರು ಸದನಗಳಲ್ಲಿ ನಿಯಮಾವಳಿಗಳಂತೆ ಚರ್ಚೆಗೆ ಅವಕಾಶ ನೀಡಿ, ಧರಣಿ ಮತ್ತು ಗದ್ದಲಗಳಿಗೆ ಮುಕ್ತಿ ಕೊಟ್ಟು ಕಾರ್ಯಕಲಾಪಗಳು ಸುಗಮವಾಗಿ ನಡೆಸುವ ಪರಂಪರೆಯನ್ನು ಬೆಳೆಸೋಣ ಎಂಬ ಸಲಹೆಯನ್ನು ನೀಡಿದ್ದಾರೆ. ಈ ಭೇಟಿ ವಿಶೇಷವೆನಿಲ್ಲ. ಚರ್ಚೆಯು ಅತ್ಯಂತ ಸೌಹಾರ್ದಯುತವಾಗಿತ್ತು ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ನಂತರ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರನ್ನು ಖಾದರ್ ಭೇಟಿ ಮಾಡಿದ್ದಾರೆ. ಇದೇ ವೇಳೆ ಖಾದರ್ ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟçಪತಿ ಜಗದೀಪ್ ಧನಕರ್ ಮುಕ್ತ ಕಂಠದಿAದ ಶ್ಲಾಘಿಸಿದ್ದಾರೆ.
ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರ ಸಾವು
ಜಾರ್ಖಂಡ್, ಜೂ. ೯: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ನಡೆದಿದೆ. ಅನೇಕರು ಕಲ್ಲಿದ್ದಲು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಸಾವು-ನೋವಿನ ಕುರಿತು ನಿಖರ ಮಾಹಿತಿ ಇಲ್ಲ, ಈಗಾಗಲೇ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಧನ್ಬಾದ್ನಿಂದ ಸುಮಾರು ೨೧ ಕಿ.ಮೀ. ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ನ (ಬಿಸಿಸಿಎಲ್) ಭೌರಾ ಕಾಲೇರಿ ಪ್ರದೇಶದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಈ ಘಟನೆ ಸಂಭವಿಸಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಗಣಿ ಕುಸಿತವಾಗಿದೆ ಎಂದು ಹೇಳಿದ್ದಾರೆ.