ಚೆಯ್ಯಂಡಾಣೆ, ಜೂ. ೮: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ನಿವಾಸಿ ಎಸ್.ಬಿ. ಪವನ್ ಬಂಧಿತ ಆರೋಪಿ.

ನಾಪೋಕ್ಲು ಸಮೀಪದ ಹಳೇ ತಾಲೂಕು ಕೂಡುರಸ್ತೆಯಲ್ಲಿರುವ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ವ್ಯಕ್ತಿಯೊಬ್ಬ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ಧಾವಿಸಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಮಡಿಕೇರಿ ನಿವಾಸಿ ನಾಪೋಕ್ಲುವಿನ ಗ್ಯಾಸ್ ಏಜೆನ್ಸಿ ಒಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿರುವ ಎಸ್.ಬಿ.ಪವನ್ ಎಂಬಾತನನ್ನು ಬಂಧಿಸಿದ್ದಾರೆ.

ಬಳಿಕ ಈತನನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಗಾAಜಾ ಸೇವನೆ- ಯುವಕ ಬಂಧನ