ಕೊಡ್ಲಿಪೇಟೆ, ಜೂ. ೧೦: ಇಲ್ಲಿನ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಪಿ. ಜಗದೀಶ್ ಬಾಬು ಅವರನ್ನು ಶಾಲಾಡಳಿತ ಮಂಡಳಿಯ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷ ಹೆಚ್.ಎಸ್. ಚಂದ್ರಮೌಳಿ ಅವರು ಮಾತನಾಡಿ, ವಿದ್ಯಾರ್ಥಿಗಳನ್ನು ಸಮಾಜದ ಉತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾಗಿ ನೇಮಕಗೊಂಡ ಶಿಕ್ಷಕ ಪವಾರ್ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಸಂಸ್ಥೆಯ ಗೌರವಾಧ್ಯಕ್ಷ ಎಸ್.ಎಸ್. ನಾಗರಾಜು, ಖಜಾಂಚಿ ಡಾ. ಉದಯ್‌ಕುಮಾರ್, ನಿರ್ದೇಶಕರಾದ ಶಂಭುಲಿAಗಪ್ಪ, ಬಿ.ಕೆ. ಯತೀಶ್, ಶಿವಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸಂದರ್ಭ ಹತ್ತನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಪೂಜಾಶ್ರೀ, ಹೇಮಲತಾ, ಬಸವರಾಜು ಅವರುಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ನಿರಂಜನ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ರಬ್, ಸುನಿಲ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.