ಕೂಡಿಗೆ, ಜೂ. ೧೦: ಗ್ರಾಮಗಳಲ್ಲಿ ಪ್ರಗತಿ ಪೂರಕ ಯೋಜನೆಗಳನ್ನು ಮೊದಲ ಹಂತದಲ್ಲಿ ಕೈಗೊಳ್ಳುವ ಮೂಲಕ ಅಭಿವೃದ್ಧಿಗೆ ಚಿಂತನೆ ನಡೆಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರ ತಾಲೂಕು ವ್ಯಾಪ್ತಿಯ ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಸಭೆಗಳಲ್ಲಿ ಭಾಗವಹಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಗ್ರಾಮಸ್ಥರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರ ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆಗಳು ನಡೆದವು. ಈ ಸಂದರ್ಭ ಆಯಾ ಗ್ರಾಮದ ಗ್ರಾಮಸ್ಥರು ಗ್ರಾಮದ ಅಭಿವೃದ್ಧಿ ಯೋಜನೆಗೆ ಸಂಬAಧಿಸಿದAತೆ ಹಲವು ಮನವಿ ಪತ್ರಗಳನ್ನು ನೀಡಿದರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಶಿರಂಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್, ಸಹಕಾರ ಸಂಘ ಮಾಜಿ ಅಧ್ಯಕ್ಷ ಚಂದ್ರಶೇಖರ್, ತೊರೆನೂರು ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಗೌಡ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್, ಅರುಣ್ರಾವ್, ಅನಂತ್, ಶಿವಕುಮಾರ, ಕೂಡುಮಂಗಳೂರು ನಾಗರಾಜ್, ಸೇರಿದಂತೆ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಪಕ್ಷದ ಪ್ರಮುಖರು ಹಾಜರಿದ್ದರು.