ಸೋಮವಾರಪೇಟೆ, ಜೂ. ೯: ಆರೋಗ್ಯ ಸುಸ್ಥಿತಿಯತ್ತ ಪ್ರತಿ ಯೋರ್ವರೂ ಗಮನ ಹರಿಸಬೇಕು. ರಕ್ತದ ಮಹತ್ವ ಅರಿವು ನಿಯಮಿತವಾಗಿ ರಕ್ತದಾನ ಮಾಡಬೇಕೆಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅವರು ಸಲಹೆ ನೀಡಿದರು.
ತಾಲೂಕು ಜಾನಪದ ಪರಿಷತ್ ವತಿಯಿಂದ ಜಿಲ್ಲಾ ರಕ್ತನಿಧಿ ಘಟಕದ ಸಹಯೋಗದೊಂದಿಗೆ ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಜೀವಿಗೂ ಅದರದೇ ಆದ ಮಹತ್ವವಿದೆ. ಎಲ್ಲಾ ಜೀವವೂ ಒಂದೇ. ಮಾನವನ ರಕ್ತ ಸಂಬAಧಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅಂತೆಯೇ ಮತ್ತೊಂದು ಜೀವ ಉಳಿಸುವಂತಹ ರಕ್ತದಾನಕ್ಕೂ ಬೆಲೆ ಕಟ್ಟಲಾಗದು ಎಂದು ಅನಂತ ಶಯನ ಅವರು ಅಭಿಪ್ರಾಯಿಸಿದರು.
ಆರೋಗ್ಯವೇ ಭಾಗ್ಯ. ಅದನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದು ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೋರ್ವರೂ ಗಮನ ಹರಿಸಬೇಕೆಂದು ಕಿವಿಮಾತು ನುಡಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಅವರು ಮಾತನಾಡಿ, ರಕ್ತದಾನ ಶಿಬಿರಗಳು ಜೀವದಾನದ ಶಿಬಿರಗಳಾಗಿವೆ. ಜಗತ್ತು ವೈಜ್ಞಾನಿಕ ವಾಗಿ ಎಷ್ಟೇ ಪ್ರಗತಿ ಸಾಧಿಸಿದ್ದರೂ, ಚಂದ್ರನ ಅಂಗಳಕ್ಕೆ ಕಾಲಿಟ್ಟಿದ್ದರೂ ಸಹ ಒಂದು ಹನಿ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ಇದು ರಕ್ತದ ಮಹತ್ವವನ್ನು ಸಾರುತ್ತದೆ. ರಕ್ತಕ್ಕೆ ಬದಲಿ ವ್ಯವಸ್ಥೆಯೂ ಇಲ್ಲ ಎಂದರು.
ರಕ್ತದಾನದ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ಶ್ರಮಿಸಬೇಕು. ರಕ್ತಕ್ಕೆ ರಕ್ತ ಮಾತ್ರವೇ ಪರ್ಯಾಯ. ಆರೋಗ್ಯವಂತ ವ್ಯಕ್ತಿಗಳು ನಿಯಮಿತವಾಗಿ ರಕ್ತದಾನ ಮಾಡಿದರೆ ಮತ್ತೊಂದು ಜೀವ ಉಳಿಸಿದ ಶ್ರೇಯಸ್ಸು ಲಭಿಸುವು ದರೊಂದಿಗೆ ತಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು ಎಂದು ಅಭಿಪ್ರಾಯಿಸಿದರು. ಜಿಲ್ಲಾ ರಕ್ತನಿಧಿ ಘಟಕದ ಮುಖ್ಯಸ್ಥ ಡಾ. ಕರುಂಬಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದ ಬೇಡಿಕೆ ಹೆಚ್ಚಿದ್ದು, ಅವಶ್ಯಕತೆ ಯಷ್ಟು ಪೂರೈಕೆಯಾಗುತ್ತಿಲ್ಲ. ಇತ್ತೀಚೆಗೆ ಡೆಂಗ್ಯೂ ಸೇರಿದಂತೆ ಇನ್ನಿತರ ಖಾಯಿಲೆಗಳಿಗೆ ಒಳಗಾಗುವ ಮಂದಿಗೆ ರಕ್ತದ ಅವಶ್ಯಕತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ದಾನಿಗಳೇ ರಕ್ತದಾನಕ್ಕೆ ಮುಂದೆ ಬರಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜಾನಪದ ಪರಿಷತ್ನ ಅಧ್ಯಕ್ಷ ಕೆ.ಎ. ಪ್ರಕಾಶ್ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಆಟೋ ಯೂನಿಯನ್ ಅಧ್ಯಕ್ಷ ಗಂಗಾಧರ್, ಆಸ್ಪತ್ರೆಯ ವೈದ್ಯೆ ಮಂಜುಳಾ ಉಪಸ್ಥಿತರಿದ್ದರು.
ಪರಿಷತ್ನ ಕಾರ್ಯದರ್ಶಿ ಎಂ.ಎ. ರುಬೀನಾ, ಉಪಾಧ್ಯಕ್ಷೆ ಸಂಧ್ಯಾ ಕೃಷ್ಣಪ್ಪ, ದಾಮೋಧರ್, ನಿರ್ದೇಶಕರುಗಳಾದ ಜಲಾ ಕಾಳಪ್ಪ, ರೇಣುಕಾ ವೆಂಕಟೇಶ್, ಸುಶೀಲಾ ಹಾನಗಲ್ಲು, ಅರುಣ ಕುಸಬೂರು, ದುಷ್ಯಂತ್ಕುಮಾರ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು. ಶಿಬಿರದಲ್ಲಿ ೩೦ ಮಂದಿ ರಕ್ತದಾನಿಗಳು ಭಾಗವಹಿಸಿ, ರಕ್ತದಾನ ಮಾಡಿದರು.