ಕುಶಾಲನಗರ, ಜೂ. ೧೦: ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ ೧೪೫ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಅರ್ಚನೆ, ಅಷ್ಟೋತ್ತರ ನಂತರ ನದಿಗೆ ಮಹಾ ಆರತಿ ಬೆಳಗಿದರು. ಈ ಸಂದರ್ಭ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಬಳಗದ ಪ್ರಮುಖರಾದ ಕೆಂಚಪ್ಪ, ಸುಮನ್, ಧರಣಿ ಮತ್ತಿತರರು ಇದ್ದರು.