ವೀರಾಜಪೇಟೆ, ಜೂ. ೧೦: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಜನಾಂಗದ ಪ್ರಮುಖರ ನಿಯೋಗ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿದರು.
ವೀರಾಜಪೇಟೆಯ ಶಾಸಕರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರ ನೇತೃತ್ವದ ನಿಯೋಗ ಜನಾಂಗದ ಸಾಮಾಜಿಕ ಅಭಿವೃದ್ಧಿಗೆ ಸಂಬAಧಿಸಿದAತೆ ಕೆಲವು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಪೊನ್ನಣ್ಣ ಅವರಿಗೆ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕರು, ಸಂಸ್ಥೆಯ ಬೇಡಿಕೆಗಳನ್ನು ಪರಿಹರಿಸಲು ಸಕಾರಾತ್ಮಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಅಕ್ಕಳತಂಡ ಎಸ್. ಮೊಯ್ದು, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ. ಹಂಸ, ನಿವೃತ್ತ ಉಪ ತಹಶೀಲ್ದಾರ್ ಚಿಮ್ಮಿಚ್ಚಿರ ಎ. ಅಬ್ದುಲ್ಲಾ ಹಾಜಿ, ಹಿರಿಯ ಕಾಂಗ್ರೆಸ್ಸಿಗರಾದ ಆಲೀರ ಎ. ಅಹಮದ್ ಹಾಜಿ, ತಾ.ಪಂ. ಮಾಜಿ ಸದಸ್ಯರಾದ ಕುವೆಂಡ ವೈ. ಆಲಿ, ಕೆದಮುಳ್ಳೂರು ಗ್ರಾ.ಪಂ. ಸದಸ್ಯ ಮೀತಲತಂಡ ಎಂ. ಇಸ್ಮಾಯಿಲ್, ಕದನೂರು ಗ್ರಾ.ಪಂ. ಮಾಜಿ ಸದಸ್ಯ ಪುದಿಯತ್ತಂಡ ಹೆಚ್. ಷಂಶುದ್ದೀನ್, ಬೇಟೋಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮಂಡೇಡ ಎ. ಮೊಯ್ದು, ಕದನೂರು ಗ್ರಾ.ಪಂ. ಮಾಜಿ ಸದಸ್ಯರಾದ ಪುದಿಯಾಣೆರ ಎಂ. ಹನೀಫ್, ಪೊಯಕೆರ ಎಸ್. ಮೊಹಮ್ಮದ್ ರಫೀಕ್ ಮೊದಲಾದವರಿದ್ದರು.