ಮಡಿಕೇರಿ, ಜೂ. ೧೦ : ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ೧೨.೩೦ಕ್ಕೆ ಮಡಿಕೇರಿ ಸರಕಾರಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.