ಮಡಿಕೇರಿ, ಜೂ. ೯: ೨೦೨೨-೨೩ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡAತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ೨೦೨೨-೨೩ನೇ ಸಾಲಿನ ವರ್ಗಾವಣೆ ಸಂಬAಧ ಪರಿಷ್ಕೃತ ವರ್ಗಾವಣಾ ವೇಳಾ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಪ್ರಥಮ ಹಂತದಲ್ಲಿ ಹೆಚ್ಚುವರಿ ಶಿಕ್ಷಕರ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಮತ್ತು ಸಂಬAಧಿಸಿದ ಬ್ಲಾಕ್‌ಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಂಬAಧಿಸಿದ ಶಿಕ್ಷಕರು ಪ್ರಕಟಿಸಿರುವ ಪಟ್ಟಿ ಪರಿಶೀಲಿಸಿಕೊಂಡು ಆಕ್ಷೇಪಣೆಗಳಿದ್ದಲ್ಲಿ ಜೂ.೧೦ ರೊಳಗೆ ಆನ್‌ಲೈನ್ ಮೂಲಕ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.