ಮಡಿಕೇರಿ, ಜೂ. ೧೧: ವೀರಾಜಪೇಟೆ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ೨೦೨೩-೨೪ ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೇ.೭೫ ಸ್ಥಾನಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.೨೫ ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೫ ನೇ ತರಗತಿಯಿಂದ ೧೦ ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ, ಈ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ (ಸ್ಯಾಟ್ಸ್ ನಂಬರ್‌ನೊAದಿಗೆ) ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬAಧಿಸಿದ ನಿಲಯಗಳ ವಾರ್ಡನ್‌ರವರಿಗೆ ಸಲ್ಲಿಸಬೇಕು.
ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಪೊನ್ನಂಪೇಟೆ, ಪಾಲಿಬೆಟ್ಟ ೯೬೧೧೨೯೬೭೭೬, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಾಳೆಲೆ ೯೬೧೧೨೯೬೭೭೬, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ವೀರಾಜಪೇಟೆ ೯೬೦೬೭೦೨೮೦೫, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪೊನ್ನಂಪೇಟೆ ೭೮೯೯೩೨೩೮೬೦ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ವೀರಾಜಪೇಟೆ ಹಾಗೂ ಕಾಕೋಟುಪರಂಬು ೮೧೦೫೦೫೧೪೯೧ ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. ೦೮೨೭೪-೨೪೯೪೭೬ ಹಾಗೂ ೯೪೮೦೮೪೩೧೫೭ ನ್ನು ಸಂಪರ್ಕಿಸ ಬಹುದು ಎಂದು ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.