ಮಡಿಕೇರಿ, ಜೂ. ೧೧: ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಹಂತಹAತವಾಗಿ ಪರಿಹಾರ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಇದನ್ನು ಒಮ್ಮೆಲೆ ಬಗೆಹರಿಸಲಾಗುವುದಿಲ್ಲ. ಆಡಳಿತಾತ್ಮಕ ಹಾಗೂ ಕಾನೂನಾತ್ಮಕವಾಗಿ ಎಲ್ಲವನ್ನು ತ್ವರಿತವಾಗಿ ಬಗೆಹರಿಸಲು ಪ್ರಯತ್ನ ಮಾಡುತ್ತೇನೆ. ಮಳೆಗಾಲದ ಮುಂಜಾಗ್ರತಾ ಕ್ರಮವನ್ನು ಜಿಲ್ಲೆಯಲ್ಲಿ ಮಾಡಲಾಗಿದೆ. ಎನ್.ಡಿ.ಆರ್.ಎಫ್. ಆಗಮಿಸಿದೆ. ಜಿಲ್ಲಾಧಿಕಾರಿ ಜೊತೆ ಮಾತನಾಡಿ ಸರಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮಾಡುತ್ತೇನೆ. ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ನನ್ನಿಂದಾಗುತ್ತದೆ ಎಂದರು.

ಜವಾಬ್ದಾರಿ ನಿರ್ವಹಿಸುತ್ತೇನೆ

ರಾಯಚೂರು ಜಿಲ್ಲೆಗೆ ನಿಮ್ಮನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಬೆಂಬಲಿಗರು ಒತ್ತಾಯ ಮಾಡುತ್ತಿರುವ ಬಗ್ಗೆ ‘ಶಕ್ತಿ’ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನರು ನನ್ನ ಮೇಲೆ ಇರುವ ಪ್ರೀತಿ, ಅಭಿಮಾನದಿಂದ ರಾಯಚೂರಿಗೆ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಕೇಳಿಕೊಳ್ಳುತ್ತಿದ್ದಾರೆ. ಸರಕಾರ ನನಗೆ ಕೊಡಗಿನ ಜವಾಬ್ದಾರಿಯನ್ನು ನೀಡಿದೆ. ಸಚಿವ ಸ್ಥಾನ ಇರುವ ಹಿನ್ನೆಲೆ ರಾಜ್ಯವ್ಯಾಪಿ ಓಡಾಡಬೇಕಾಗಿದೆ. ಕಾವೇರಿ ತವರೂರು ಕೊಡಗಿನಲ್ಲಿ ಕೆಲಸ ಮಾಡುವುದು ಖುಷಿ ಇದೆ. ಸರಕಾರ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ, ವಿಧಾನ ಪರಿಷತ್ತು ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.