ನಾಪೋಕ್ಲು, ಜೂ. ೧೧: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೂರ್ನಾಡು ಮುಖ್ಯ ರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ಶುಕ್ರವಾರ ಸಂಭವಿಸಿದ ದ್ವಿಚಕ್ರ ವಾಹನ ಮತ್ತು ಕಾರಿನ ನಡುವಿನ ಅಪಘಾತದಲ್ಲಿ ಮೃತಪಟ್ಟ ಅಪ್ಪಾಜಿ (೧೯) ಎಂಬ ಯುವಕನ ತಾಯಿ ಕಮಲ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.