ಮಡಿಕೇರಿ, ಜೂ.೧೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-೧೦೯೮ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೧೨ ರಂದು ಬೆಳಗ್ಗೆ ೧೦.೧೫ ಗಂಟೆಗೆ ನಗರದ ಸರ್ಕಾರಿ ಪ್ರೌಢ ಶಾಲಾ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಇತರರು ಪಾಲ್ಗೊಳ್ಳ ಲಿದ್ದಾರೆ. ಹಿರಿಯ ವಕೀಲ ಕೆ.ಆರ್. ವಿದ್ಯಾಧರ ಗೌಡ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.