ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಿ - ಪ್ರಧಾನಿ ಮೋದಿ
ನವದೆಹಲಿ, ಜೂ. ೧೨: ಬಿಪರ್ಜೋಯ್ ಚಂಡಮಾರುತ ಗುಜರಾತ್ನ ಕಚ್ಗೆ ಅಪ್ಪಳಿಸುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವAತೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನೈಋತ್ಯ ಮುಂಗಾರಿನ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ 'ಬಿಪರ್ಜೋಯ್' ಚಂಡಮಾರುತ ಅಬ್ಬರ ಜೋರಾಗಿದ್ದು, ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಚಂಡಮಾರುತ ಎದುರಿಸಲು ಕೇಂದ್ರ ಸರ್ಕಾರ ಮತ್ತು ಗುಜರಾತ್ ಸರ್ಕಾರದ ಸನ್ನದ್ಧತೆಯನ್ನು ಪ್ರಧಾನಿ ಮೋದಿ ಪರಿಶೀಲಿಸಿದರು. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ರಾಜ್ಯ ಸರ್ಕಾರ ಸುರಕ್ಷಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಎಂದು ಪ್ರಧಾನಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.
ಇಂದಿರಾ ಕ್ಯಾಂಟಿನ್; ಆಹಾರ ಕ್ರಮದಲ್ಲಿ ಬದಲಾವಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂ. ೧೨: ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರAತೆ ಕನಿಷ್ಠ ೨೫೦ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಂದಿರಾ ಕ್ಯಾಂಟೀನ್ಗಳ ಪುನರಾರಂಭಕ್ಕೆ ಸಂಬAಧಿಸಿದAತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ಗೆ ಬಿಬಿಎಂಪಿ ವತಿಯಿಂದ ಶೇ.೭೦ ರಷ್ಟು ಹಾಗೂ ಸರ್ಕಾರದಿಂದ ಶೇ.೩೦ ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯಿAದ ಶೇ. ೫೦ ರಷ್ಟು ಹಾಗೂ ಸರ್ಕಾರದಿಂದ ಶೇ. ೫೦ ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ ಎಂದರು. ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. ೭೦ ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. ೩೦ ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇಂದಿರಾ ಕ್ಯಾಂಟೀನ್ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು.
ಒಂದೇ ದಿನ ೫.೭೧ ಲಕ್ಷ ಮಹಿಳೆಯರು ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ
ಬೆಂಗಳೂರು, ಜೂ. ೧೨: ರಾಜ್ಯ ಸರ್ಕಾರ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದ್ದು, ಮೊದಲ ದಿನವೇ ಬರೋಬ್ಬರಿ ೫.೭೧ ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿನ್ನೆ ಮಧ್ಯಾಹ್ನದಿಂದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಒಂದೇ ದಿನ ೫.೭೧ ಲಕ್ಷ ಮಹಿಳೆಯರು ಸರ್ಕಾರಿ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ ೧ರಿಂದ ರಾತ್ರಿ ೧೨ರವರೆಗೆ ಒಟ್ಟು ೫.೭೧ ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಈ ಪೈಕಿ ಬಿಎಂಟಿಸಿ ಬಸ್ನಲ್ಲಿ ಒಟ್ಟು ೨,೦೧,೨೧೫, ವಾಯವ್ಯ ಸಾರಿಗೆ ಬಸ್ನಲ್ಲಿ ೧,೨೨,೩೫೪, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ೫೩,೬೨೩, ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಯಾಣದ ಟಿಕೆಟ್ ವೆಚ್ಚ ೧,೪೦,೨೨,೮೭೮ ರೂ. ಆಗಿದೆ.
ಹಾಜರಾತಿಯಿಂದ ವಿನಾಯಿತಿ ವಿಸ್ತರಣೆ : ರಾಹುಲ್ ಗಾಂಧಿಗೆ ರಿಲೀಫ್
ಮುಂಬೈ, ಜೂ. ೧೨: ೨೦೧೮ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗೆ ಸಂಬAಧಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿದ್ದ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ಆಗಸ್ಟ್ ೨ರವರೆಗೆ ವಿಸ್ತರಿಸಿದೆ. ರಫೇಲ್ ಯುದ್ಧವಿಮಾನ ಹಗರಣಕ್ಕೆ ಸಂಬAಧಿಸಿದAತೆ ಪ್ರಧಾನಿ ಮೋದಿ ಅವರನ್ನು "ಕಮಾಂಡರ್-ಇನ್-ಥೀಫ್" ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ಈ ಸಂಬAಧ ಬಿಜೆಪಿ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಅಕ್ರಮ ಮುಸ್ಲಿಂ ವಲಸಿಗರನ್ನು ಓಡಿಸುತ್ತೇವೆ: ಗಿರಿರಾಜ್ ಸಿಂಗ್
ಪಾಟ್ನಾ, ಜೂ. ೧೨: ಎಲ್ಲಾ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರು ಮತ್ತು ರೋಹಿಂಗ್ಯಾ ಮುಸ್ಲಿಮರನ್ನು ರಾಜ್ಯದಿಂದ ವಾಪಸ್ ಕಳುಹಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಗತ್ಯ ಕ್ರಮಗಳ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ. ಬೇಗುಸರಾಯ್ನಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಗಿರಿರಾಜ್ ಸಿಂಗ್ ಅವರು ಉತ್ತರಿಸಿದರು. ಈ ವೇಳೆ ಅಕ್ರಮ ಮುಸ್ಲಿಂ ವಲಸಿಕರನ್ನು ದೇಶದಿಂದ ಓಡಿಸಬೇಕಿದೆ ಎಂದು ಹೇಳಿದರು. ಅಕ್ರಮ ಮುಸ್ಲಿಂ ವಲಸಿಗರ ಓಡಿಸಲುವಲ್ಲಿ ನಿತೀಶ್ ಸರ್ಕಾರ ವಿಫಲವಾಗಿದ್ದೇ ಆದರೆ, ಮುಂದಿನ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ, ಸರ್ಕಾರ ರಚಿಸಿದ್ದೇ ಆದರೆ, ರಾಜ್ಯದಲ್ಲಿ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾ ಮುಸ್ಲಿಮರ ವಾಪಸಾತಿಗೆ ಕ್ರಮಗಳ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ
ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ!
ರಾಜಮಹೇಂದ್ರವರA, ಜೂ. ೧೨: ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸೋಮವಾರ ನಸುಕಿನ ವೇಳೆ ಹೆದ್ದಾರಿಯಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ನಲ್ಲಚಾರ್ಲ ಗ್ರಾಮದಲ್ಲಿ ಕಾರು ಹೆದ್ದಾರಿಯಿಂದ ಪಲ್ಟಿಯಾಗಿ ರಸ್ತೆಯ ಅಂಚಿನಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೂರ್ವ ಗೋದಾವರಿ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮೃತಪಟ್ಟ ಆರು ಮಂದಿ ಒಂದೇ ಕುಟುಂಬದವರು. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದೆ. ಕಾರಿನಲ್ಲಿದ್ದವರು ವಿಜಯವಾಡದಿಂದ ರಾಜಮಹೇಂದ್ರವರAಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.