ಮಡಿಕೇರಿ, ಜೂ. ೧೨ : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿ ಗಳು ಜೂ.೨೫ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾದ ಅಧ್ಯಕ್ಷ ಡಾ.ಶಾಮ ನೂರು ಶಿವಶಂಕರಪ್ಪ, ೨೦೨೨-೨೩ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿ ಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳು ಸ್ವ-ವಿವರಗಳೊಂದಿಗೆ ಅರ್ಜಿಯನ್ನು ಮಹಾಸಭೆಯ ತಿತಿತಿ.veeಡಿಚಿ shಚಿivಚಿmಚಿhಚಿsಚಿbhಚಿ.iಟಿ ವೆಬ್‌ಸೈಟ್‌ನಲ್ಲಿ ಜೂ.೨೫ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಬಂದ ಅರ್ಜಿ ಯನ್ನು ಮಾತ್ರ ಸ್ವೀಕರಿಸಲಾಗುವುದು.