ಸಿದ್ದಾಪುರ, ಜೂ. ೧೨: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ನೂತನ ಶಾಸಕರಾಗಿ ಆಯ್ಕೆಯಾದ ಡಾ. ಮಂಥರ್‌ಗೌಡ ಅವರಿಗೆ ನೆಲ್ಲಿಹುದಿಕೇರಿಯಲ್ಲಿ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಥರ್‌ಗೌಡ ಮುಂದಿನ ದಿನಗಳಲ್ಲಿ ತಾನು ಈ ಭಾಗದ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ನೆಲ್ಲಿಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಡು ವಂತೆ ಶಾಸಕ ಮಂಥರ್‌ಗೌಡ ಅವರಿಗೆ ಮನವಿ ಸಲ್ಲಿಸಿದರು. ಸಮಾರಂಭದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಜಿ.ಪಂ. ಮಾಜಿ ಸದಸ್ಯೆ ಸುನೀತ ಮಂಜುನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿ ಮತ್ತು ಸ್ಥಳೀಯ ಪದಾಧಿಕಾರಿಗಳು ಗ್ರಾ.ಪಂ. ಸದಸ್ಯರುಗಳು ಹಾಜರಿದ್ದರು.