ಚೆಯ್ಯAಡಾಣೆ, ಜೂ. ೧೩: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತರ್ ಜಿಲ್ಲೆಯ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯಿಂದ ಹೊದವಾಡ ಗ್ರಾಮಕ್ಕೆ ತೆರಳುವ ಕೂಡು ರಸ್ತೆಯಲ್ಲಿರುವ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ವ್ಯಕ್ತಿಯೊಬ್ಬ ಯತ್ನಿಸುತ್ತಿರುವ ಬಗ್ಗೆ ನಾಪೋಕ್ಲು ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ (ಆರ್ಯಾಪು) ಗ್ರಾಮದ ನಿವಾಸಿ ಸೈಯದ್ ಸಿ.ಎಚ್ (೩೫) ಎಂಬ ಆರೋಪಿಯನ್ನು ಬಂಧಿಸಿ ಆರೋಪಿಯಿಂದ ೨೭೦ ಗ್ರಾಂ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕ ಸುಂದರ್‌ರಾಜ್ ನಿರ್ದೇಶನದಲ್ಲಿ ಡಿವೈಎಸ್‌ಪಿ ಜಗದೀಶ್, ವೃತ ನಿರೀಕ್ಷಕ ಅನೂಪ್ ಮಾದಪ್ಪ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಸಾಜನ್, ಲವಕುಮಾರ್, ಪಂಚಲಿAಗಪ್ಪ ಸತ್ತಿಗೇರಿ, ಶರತ್ ಕುಮಾರ್, ಪ್ರಸನ್ನ, ಗಿರೀಶ್, ಚಾಲಕ ಷರೀಫ್ ಪಾಲ್ಗೊಂಡಿದ್ದರು.

ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಸಾರ್ವಜನಿಕರು ಮೊಬೈಲ್ ಸಂಖ್ಯೆ ೯೪೮೦೮೦೪೯೪೮ ಕ್ಕೆ ಮಾಹಿತಿ ನೀಡುವಂತೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಳು ಕುರಿತು ಮಾಹಿತಿ ನೀಡುವವರ ವಿಳಾಸವನ್ನು ಗೌಪ್ಯವಾಗಿಡಲಾಗುವುದೆಂದು ಅವರು ತಿಳಿಸಿದ್ದಾರೆ.

-ಅಶ್ರಫ್