ಗೋಣಿಕೊಪ್ಪಲು, ಜೂ. ೧೩: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದ ಎ.ಎಸ್.ಪೊನ್ನಣ್ಣ ಗೆಲುವು ಸಾಧಿಸಿದ್ದಲ್ಲಿ ಉರುಳು ಸೇವೆ ಮಾಡುವುದಾಗಿ ಹರಕೆ ಮಾಡಿಕೊಂಡಿದ್ದ ದಕ್ಷಿಣ ಕೊಡಗಿನ ಚಂದುರ ಸುಗುಣ ಹಾಗೂ ಮಾಚಿಮಾಡ ಗೋಪಾಲ ಎಂಬವರುಗಳು ಪೊನ್ನಂಪೇಟೆ ಬಸ್ ನಿಲ್ದಾಣದಲ್ಲಿರುವ ಇತಿಹಾಸ ಪ್ರಸಿದ್ಧ ಬಸವೇಶ್ವರ ದೇವಸ್ಥಾನದ ಸುತ್ತಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಸಮ್ಮುಖದಲ್ಲಿ ಉರುಳು ಸೇವೆ ನಡೆಸಿ ಪೂಜೆ ಸಲ್ಲಿಸಿದರು.
ಈ ವೇಳೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯP್ಷÀ ಮೀದೇರಿರ ನವೀನ್ ಕಾಂಗ್ರೆಸ್ ಮುಖಂಡರಾದ ಕೊಲ್ಲೀರ ಬೋಪಣ್ಣ, ಉಮೇಶ್ ಕೇಚಮಯ್ಯ, ಮೂಕಳೇರ ಕುಶಾಲಪ್ಪ, ಅಣ್ಣಿರ ಹರೀಶ್, ಸಾಜಿ ಅಚ್ಚುತ್ತನ್, ಗಿರೀಶ್ ಸೇರಿದಂತೆ ಪಕ್ಷದ ಅನೇಕ ಪ್ರಮುಖರು ಹಾಜರಿದ್ದರು.