ಕರಾವಳಿ ಜಿಲ್ಲೆಗಳಿಂದ ೨೧,೦೦೦ ಜನರ ಸ್ಥಳಾಂತರ
ಅಹಮದಾಬಾದ್, ಜೂ. ೧೩: ವ್ಯಾಪಕ ಹಾನಿಯುಂಟುಮಾಡುವ ಸಾಮರ್ಥ್ಯ ಹೊಂದಿರುವ ‘ಬಿಪರ್ಜೋಯ್' ಚಂಡಮಾರುತ ಗುರುವಾರ ಸಂಜೆ ಗುಜರಾತ್ನ ಕಚ್ ಜಿಲ್ಲೆಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಕರಾವಳಿ ಜಿಲ್ಲೆಗಳಿಂದ ೨೧,೦೦೦ ಜನರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಿದೆ. ಕರಾವಳಿಯ ೧೦ ಕಿ.ಮೀ. ವ್ಯಾಪ್ತಿಯ ಜನರನ್ನು ಸ್ಥಳಾಂತರಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಈ ಚಂಡಮಾರುತದ ಪ್ರಭಾವದಿಂದ ಭಾರಿ ಮಳೆ ಮತ್ತು ಭೂಕುಸಿತ ಉಂಟಾಗಲಿದ್ದು, ಅತ್ಯಂತ ವೇಗವಾಗಿ ಅಂದರೆ ಗರಿಷ್ಠ ಗಂಟೆಗೆ ೧೫೦ ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಕಾಶ್ಮೀರದ ದೋಡಾದಲ್ಲಿ ೫.೪ ತೀವ್ರತೆಯ ಭೂಕಂಪ
ನವದೆಹಲಿ, ಜೂ. ೧೩: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ ೫.೪ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟಿçÃಯ ಭೂಕಂಪಶಾಸ್ತç ಕೇಂದ್ರ (ಎನ್ಸಿಎಸ್) ತಿಳಿಸಿದೆ. ಇಂದು ಮಧ್ಯಾಹ್ನ ೧.೩೩ಕ್ಕೆ ಈ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ೫.೪ ರಷ್ಟು ತೀವ್ರತೆ ದಾಖಲಾಗಿದೆ ಎನ್ಸಿಎಸ್ ಟ್ವೀಟ್ ಮಾಡಿದೆ. ರಾಷ್ಟç ರಾಜಧಾನಿ ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಇದು ಕಳೆದ ವಾರದ ಕಂಪನಕ್ಕಿAತ ಹೆಚ್ಚು ತೀವ್ರವಾಗಿತ್ತು ಎಂದು ಶ್ರೀನಗರದ ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಎನ್ಸಿಎಸ್ ಪ್ರಕಾರ ಜೂನ್ ೯ ರಂದು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ೩.೯ ತೀವ್ರತೆಯ ಭೂಕಂಪ ಸಂಭವಿಸಿತ್ತು.
ಹೊತ್ತಿ ಉರಿದ ಆಯಿಲ್ ಟ್ಯಾಂಕರ್: ನಾಲ್ವರು ಸಜೀವ ದಹನ
ಮುಂಬೈ, ಜೂ. ೧೩: ಮಹಾರಾಷ್ಟçದ ಲೋನಾವಾಲಾ ಬಳಿ ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ತೈಲ ಟ್ಯಾಂಕರ್ವೊAದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿAದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು ಬದಿ ಮಾತ್ರ ಬಳಕೆಯಲ್ಲಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು ಎಂದು ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದ ಟ್ಯಾಂಕರ್ ಅನ್ನು ತೆರವುಗೊಳಿಸಿ, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುವಂತಾಯಿತು. ರಾಸಾಯನಿಕ ಪದಾರ್ಥ ತುಂಬಿದ್ದ ಟ್ಯಾಂಕರ್ ಉರುಳಿದ ಕೂಡಲೇ ಬೆಂಕಿ ಸ್ಫೋಟಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ಯಾಂಕರ್ನ ಸಮೀಪದಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೂ ಬೆಂಕಿ ತಗುಲಿದೆ.
ಇಸ್ರೇಲ್ನಿಂದ ನೂರಾರು ಭಯೋತ್ಪಾದಕರ ಹತ್ಯೆ
ಇಸ್ರೇಲ್, ಜೂ. ೧೩: ಇಸ್ರೇಲ್ನ ರಕ್ಷಣಾ ಪಡೆಗಳು ೨೦೧೫ ರಲ್ಲಿ ಇಸ್ಲಾಮಿಕ್ ಸ್ಟೇಟ್ನ ವಿರುದ್ಧ ಬಾಹ್ಯ ಕಾರ್ಯಾಚರಣೆಗಳನ್ನು ನಡೆಸಿ ನೂರಾರು ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ನ ಶಾಸಕ ಹಾಗೂ ಮಾಜಿ ಸೇನಾ ಮುಖ್ಯಸ್ಥ ಗ್ಯಾಡಿ ಐಸೆನ್ಕೋಟ್ ತಿಳಿಸಿದ್ದಾರೆ. ಐಡಿಎಫ್ ಎಷ್ಟು ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿದೆ ಎಂಬುದನ್ನು ಐಎಸ್ಐಎಸ್ ಅರಿತಿದ್ದು, ನೂರಾರು ಮಂದಿ ಉಗ್ರರನ್ನು ಕಳೆದುಕೊಂಡು, ಅಷ್ಟೇ ಸಂಖ್ಯೆಯ ಉಗ್ರರು ತೀವ್ರವಾಗಿ ಗಾಯಗೊಂಡಿದ್ದರು ಎಂದು ಗ್ಯಾಡಿ ಐಸೆನ್ಕೋಟ್ ಮಾಹಿತಿ ನೀಡಿದ್ದಾರೆ. ಟೆಲ್ ಅವೀವ್ನ ಇನ್ಸ್ಟಿಟ್ಯೂಟ್ ಫಾರ್ ನ್ಯಾಷನಲ್ ಸೆಕ್ಯುರಿಟಿ ಸ್ಟಡೀಸ್ ಕಾನ್ಫರೆನ್ಸ್ನಲ್ಲಿ ಮಾತನಾಡಿರುವ ಗ್ಯಾಡಿ ಐಸೆನ್ಕೋಟ್, ನಿರ್ದಿಷ್ಟಪಡಿಸದ ಮೂರನೇ ವ್ಯಕ್ತಿಯಿಂದ ಸಹ ಇಸ್ರೇಲ್ಗೆ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸಲು ಮನವಿ ಬಂದಿತ್ತು ಎಂದು ತಿಳಿಸಿದ್ದು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.