ವೀರಾಜಪೇಟೆ, ಜೂ. ೧೪: ವೀರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ವೀರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ವತಿಯಿಂದ ಮುಂದಿನ ಅವಧಿಗೆ ಹಲವಾರು ಕಾರ್ಯಕ್ರಮಗಳು ಸೇರಿದಂತೆ ಕೊಡಗಿನ ಹಬ್ಬ ಹರಿದಿನಗಳ ಆಚರಣೆ ಮತ್ತು ಅವುಗಳ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಹಾಗೂ ಆಟೋಟ ಸ್ಪರ್ಧೆಗಳು, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು.

ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಒಕ್ಕೂಟದ ಮೂಲಕ ಕೊಡವ ಸಂಸ್ಕೃತಿ ಆಚಾರ ವಿಚಾರಗಳಿಗೆ ಸಂಬAಧಪಟ್ಟAತೆ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಕೊಡವಾಮೆ ಉಳಿಸಿ ಬೆಳೆಸುವಂತಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ ಪದ್ಧತಿ ಪರಂಪರೆಯನ್ನು ತಿಳಿಸಿಕೊಡಬೇಕು. ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಆಚಾರ ವಿಚಾರಗಳು, ಹಬ್ಬ ಹರಿದಿನಗಳು ಮತ್ತು ಅವುಗಳ ಮಹತ್ವದ ಅರಿವು ಮೂಡಿಸಬೇಕು. ಹೆಚ್ಚು ಮಹಿಳೆಯರು ಒಕ್ಕೂಟದ ಸದಸ್ಯತ್ವ ಪಡೆಯುವ ಮೂಲಕ ಸಹಕರಿಸಬೇಕು. ಒಕ್ಕೂಟದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಸುಮ್ಮನೆ ಮನೆಯಲ್ಲೇ ಕುಳಿತುಕೊಳ್ಳುವ ಕೆಲವು ಮಹಿಳೆಯರಿಗೆ ಮಾನಸಿಕವಾಗಿ ಶಕ್ತಿ ತುಂಬುವ ಕೆಲಸವಾಗುತ್ತದೆ ಎಂದರು.

ಒಕ್ಕೂಟದ ಸದಸ್ಯೆ ಉದ್ದಪಂಡ ವಿಮಲಾ ಪ್ರಾರ್ಥಿಸಿದರೆ, ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಳಿಯಪ್ಪ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ತಾತಂಡ ಯಶು ಕಬೀರ್ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿದರು.

ವಾರ್ಷಿಕ ಮಹಾಸಭೆಯ ವೇದಿಕೆಯಲ್ಲಿ ಉಪಾಧ್ಯಕ್ಷೆ ಅಮ್ಮಣಿಚಂಡ ಈಶ್ವರಿ ಗಂಗಮ್ಮ, ಸಹ ಕಾರ್ಯದರ್ಶಿ ಮಾಳೇಟಿರ ಕವಿತಾ ಶ್ರೀನಿವಾಸ್, ಸಲಹಾ ಸಮಿತಿ ಸದಸ್ಯೆ ಬಿದ್ದಂಡ ರಾಣಿ ಉತ್ತಯ್ಯ, ನಾಯಕಂಡ ಬೇಬಿ ಚಿಣ್ಣಪ್ಪ ಉಪಸ್ಥಿತರಿದ್ದರು.