ಮಡಿಕೇರಿ, ಜೂ.೧೩: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಂದು ಗ್ರಾಮೀಣ ಕುಟುಂಬಕ್ಕೆ ೧೦೦ ದಿನಗಳ ಕೆಲಸವನ್ನು ನೀಡುತ್ತಿದ್ದು, ಅರ್ಹರೆಲ್ಲರೂ ಬಳಸಿಕೊಳ್ಳುವಂತಾ ಗಬೇಕು ಎಂದು ಜಿ.ಪಂ. ಸಿಇಓ ಡಾ.ಎಸ್. ಆಕಾಶ್ ಸಲಹೆ ನೀಡಿದರು.
ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ನರೇಗಾ ಯೋಜನೆಯಡಿ ಹಲವು ಅಭಿವೃದ್ಧಿ ಕೆಲಸಗಳು ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದು ಪ್ರಮುಖವಾಗಿ ಅಮೃತ್ ಸರೋವರ ಕಾಮಗಾರಿ ಪೂರ್ಣಗೊಳ್ಳುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆಗಳ ಅಭಿವೃದ್ಧಿ ಸಂಬAಧಿಸಿದAತೆ ಮಾತನಾಡಿ ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಎಲ್ಲಾ ಕಾಮಗಾರಿ ಕೆಲಸಗಳನ್ನು ತುರ್ತಾಗಿ ಪೂರ್ಣ ಗೊಳಿಸಿ ನೀರಿನ ಸಮಸ್ಯೆಗಳು ಬರ ದಂತೆ ನೋಡಿಕೊಳ್ಳಲು ತಿಳಿಸಿದರು.
ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಗೆ ಸಂಬAಧಿಸಿದAತೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ನಡೆಸಿ ಮಾದರಿ ಗ್ರಾಮಗಳನ್ನಾಗಿ ಮಾಡಲು ಶ್ರಮಿಸಬೇಕು ಎಂದರು. ಇದೀಗ ಶಾಲೆಗಳು ಪ್ರಾರಂಭ ವಾಗಿದ್ದು, ಡಿಜಿಟಲ್ ಗ್ರಂಥಾಲ ಯಗಳಿಗೆ ಶಾಲಾ ಮಕ್ಕಳು ಶೇ.೧೦೦ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಬೇಕು. ಜೊತೆಗೆ ವಿಶೇಷ ಚಟುವಟಿಕೆ ಕೈಗೊಳ್ಳುವಂತಾಗಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲಾ ಯೋಜನೆಗಳನ್ನು ಸಮರ್ಥವಾಗಿ ಅಭಿವೃದ್ಧಿಪಡಿಸಿ ಯಾವುದೇ ಕುಂದುಕೊರತೆಗಳು ಬಾರದಂತೆ ನೋಡಿಕೊಳ್ಳಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿಗಳಾದ ಧನರಾಜ್, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ತಾ.ಪಂ. ಇಓ ಕೆ.ಸಿ. ಅಪ್ಪಣ್ಣ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ತಾ.ಪಂ.ಸಿಬ್ಬAದಿ ವರ್ಗದವರು, ಮನರೇಗಾ ಯೋಜನೆಯ ಎಲ್ಲಾ ತಾಂತ್ರಿಕ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.