ಕೂಡಿಗೆ, ಜೂ. ೧೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿರುವ ಚೌಡಮ್ಮ ದೇವಿ ಸಮಿತಿಯ ವತಿಯಿಂದ ಬಸವನತ್ತೂರು ಗ್ರಾಮದೇವತೆಯ ಹಬ್ಬವು ಶ್ರದ್ಧಾಭಕ್ತಿಯಿಂದ ನಡೆಯಿತು.

ಹಬ್ಬದ ಅಂಗವಾಗಿ ದೇವಾಲಯದಲ್ಲಿ ಗಣಪತಿ ಹೋಮ, ನವಗ್ರಹ ಹೋಮ, ದುರ್ಗ ಶಾಂತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಶ್ರೀ ದೇವಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ವಾರ್ಷಿಕ ಪೂಜೋತ್ಸವ ಕಾರ್ಯಕ್ರಮದಲ್ಲಿ ಕೂಡುಮಂಗಳೂರು, ಕೂಡಿಗೆ, ಬಸವನತ್ತೂರು ಕೂಡ್ಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮಸ್ಥರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಬಸವನತ್ತೂರು ಗ್ರಾಮವು ವಿದ್ಯುತ್ ದೀಪಗಳಿಂದ, ತಳಿರು ತೋರಣಗಳಿಂದ ಸಿಂಗಾರಗೊAಡಿತ್ತು.