ಕೂಡಿಗೆ, ಜೂ. ೧೪: ರಕ್ತದಾನ ದಂತಹ ಪುಣ್ಯ ಕಾರ್ಯದಲ್ಲಿ ಯುವ ಜನತೆ ಸ್ವಯಂಪ್ರೇರಣೆಯಿAದ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ ಕೊಡಗು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವಿಶ್ವ ವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೋಮವಾರಪೇಟೆ ತಾಲೂಕು, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ರೋಟರಿ ಸಂಸ್ಥೆ ಕುಶಾಲನಗರ, ಲಯನ್ಸ್ ಸಂಸ್ಥೆ ಕುಶಾಲನಗರ ಹಾಗೂ ವಾಣಿಜ್ಯೋದ್ಯಮಿಗಳ ನಿಗಮ ಕುಶಾಲನಗರ ಇವುಗಳ ಸಂಯುಕ್ತಾಶ್ರಯದಲ್ಲಿ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಆವರಣ ದಲ್ಲಿನ ಮಾನವಿಕ ಸಂಕೀರ್ಣದ ಕಾವೇರಿ ಸಭಾಂಗಣದಲ್ಲಿ ಹಮ್ಮಿ ಕೊಂಡಿದ್ದ ‘ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿರುವುದರಿಂದ ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳ ಸಹಕಾರದೊಂದಿಗೆ ರಕ್ತದಾನ ಶಿಬಿರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆ ಮಾಡುವ ಮೂಲಕ ಅಗತ್ಯತೆ ಪೂರೈಸಲು ಗಮನಹರಿಸಬೇಕು ಎಂದರು.
ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್ ಮಾತನಾಡಿ, ರಕ್ತ ನೀಡಿ ಪ್ಲಾಸ್ಮ ನೀಡಿ, ಜೀವನ ಹಂಚಿಕೊಳ್ಳಿ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಮಾತನಾಡಿ, ತುರ್ತು ಪರಿಸ್ಥಿತಿಗಳು, ಅಪಘಾತಗಳ ಸಮಯದಲ್ಲಿ ರಕ್ತದ ತುರ್ತು ಅಗತ್ಯವಿರುತ್ತದೆ. ಕೆಂಪು ರಕ್ತಕಣ, ಬಿಳಿ ರಕ್ತಕಣ, ಪ್ಲಾಸ್ಮ, ಪ್ಲೇಟ್ಲೇಟ್ಸ್ ಈ ಎಲ್ಲಾ ಅಂಶಗಳನ್ನು ಬೇರ್ಪಡಿಸುವಿಕೆಗೆ ಘಟಕವಿದೆ. ತುರ್ತು ಸಂದರ್ಭಕ್ಕೆ ರಕ್ತದ ಅಗತ್ಯತೆಯನ್ನು ಪೂರೈಸಲು ಸೋಮವಾರಪೇಟೆ ಮತ್ತು ವೀರಾಜಪೇಟೆಯ ಸಾರ್ವಜನಿಕ ಆಸ್ಪತ್ರೆ, ಕುಶಾಲನಗರ ಮತ್ತು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ನಾಲ್ಕು ರಕ್ತ ಶೇಖರಣಾ ಘಟಕಗಳಿವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಆರೋಗ್ಯಕರ ಜೀವನ ನಡೆಸಲು ರಕ್ತ ಅತೀ ಅವಶ್ಯಕ. ರಕ್ತದಾನ ಮಾಡುವಂತೆ ಪ್ರೇರೇಪಿಸಲು ಇಂತಹ ಕಾರ್ಯಕ್ರಮಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಹೇಳಿದರು.
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಸಾಧಕರಾದ ಶರತ್ಕಾಂತ್, ಮಣಿಕಂಠ, ಮಾರುತಿ ಪ್ರಸಾದ್, ಪ್ರತಿಷ್ಠಾ ಅವರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮವನ್ನು ಸಂಯೋ ಜಿಸಿದ್ದ ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಆನಂದ್ ಎನ್. ಅವರು, ಕೊಡಗು ವಿವಿ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಮಾನಸಿಕ ಸದೃಢತೆಗೆ ಪೂರಕವಾಗುವಂತೆ ವೈದ್ಯಾಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಕುಶಾಲನಗರದ ರೋಟರಿ ಅಧ್ಯಕ್ಷ ಉಲ್ಲಾಸ್ ಕೃಷ್ಣ, ವಾಣಿಜ್ಯೋದ್ಯಮಿಗಳ ನಿಗಮದ ಅಧ್ಯಕ್ಷ ಅಮೃತ ರಾಜ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ, ವೈದ್ಯಾಧಿಕಾರಿ ಡಾ. ಅಶೋಕ್ ಕುಮಾರ್, ಮೇಲ್ವಿಚಾರಕಿ ಸುನೀತಾ, ಕುಶಾಲನಗರದ ಎಂಜಿಎA ಪದವಿ ಕಾಲೇಜಿನ ವಿದ್ಯಾರ್ಥಿಗಳು, ಕೊಡಗು ವಿವಿಯ ಬೋಧಕ, ಬೋಧಕೇತರ ವೃಂದ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕ ಜಮೀರ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.