ಕೂಡಿಗೆ, ಜೂ. ೧೩: ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪು ಗೊಳ್ಳಬೇಕು ಎಂದು ಸೋಮವಾರ ಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಕರೆ ನೀಡಿದರು.
ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ಜೆ.ಸಿ. ಬೋಸ್ ಇಕೋ ಕ್ಲಬ್, ರಾಷ್ಟಿçÃಯ ಸೇವಾ ಯೋಜನಾ (ಎನ್.ಎಸ್.ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ. ಘಟಕದ ವತಿಯಿಂದ ‘ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕವಾದ ನಿರ್ವಹಣೆ ಪರಿಸರ ಮತ್ತು ಜೀವ- ಸಂಕುಲದ ಸಂರಕ್ಷಣೆ' ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನ'ದ ಅಂಗವಾಗಿ ಪ್ರೌಢಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ "ನಮ್ಮ ನಡೆ ಪರಿಸರದೆಡೆಗೆ" - "ಗೋ ಗ್ರೀನ್ ಅಭಿಯಾನ"ಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ, ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಭವಿಷ್ಯದ ದೃಷ್ಟಿಯಿಂದ ಅರಣ್ಯ ಸಂರಕ್ಷಣೆಗಾಗಿ ನಾವು ಹೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ತೊಡಬೇಕು ಎಂದರು.
"ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳು" ಕುರಿತು ಮಾಹಿತಿ ನೀಡಿದ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಎಸ್. ಸತೀಶ್, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.
ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಸಂಪನ್ಮೂಲ ಶಿಕ್ಷಕರಾದ ಜಿ. ಶ್ರೀನಾಥ್, ಉ.ರಾ. ನಾಗೇಶ್, ಎಸ್.ಡಿ.ಎಂ.ಸಿ. ಸದಸ್ಯರಾದ ಜವರಯ್ಯ, ಎಂ. ರಂಗಸ್ವಾಮಿ, ಕೆ.ಎಸ್. ರಾಜಾಚಾರಿ, ಉಷಾ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಸಿ.ಆರ್.ಪಿ. ಕೆ. ಶಾಂತ ಕುಮಾರ್, ಸ್ವಯಂ ಸೇವಾ ಸಂಘಟನೆಯ ಪ್ರಮುಖರಾದ ಸುನಂದ ಕುಮಾರ್, ಹೆಚ್.ಸಿ. ಗೋವಿಂದರಾಜ್, ಅರಣ್ಯ ರಕ್ಷಕ ಮಂಜೇಗೌಡ ಇತರರು ಇದ್ದರು.
ಇದಕ್ಕೂ ಮುನ್ನ ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.