ಮಡಿಕೇರಿ, ಜೂ. ೧೪: ಮರ ಕಡಿಯುತ್ತಿದ್ದ ಸಂದರ್ಭ ಮರ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಇಬ್ನಿ ರೆಸಾರ್ಟ್ನ ಗಾರ್ಡನ್‌ನಲ್ಲಿ ಕೆಲಸ ಮಾಡುತ್ತಿದ್ದ ಕಲಂದರ್ (೩೯) ಎಂಬವರೆ ಮೃತ ದುರ್ದೈವಿ. ಇಂದು ರೆಸಾರ್ಟ್ನಲ್ಲಿ ಸಿಲ್ವರ್ ಮರ ಕಡಿಯುತ್ತಿದ್ದ ಸಂದರ್ಭ ಕಲಂದರ್ ಅವರ ಮೇಲೆ ಮರ ಬಿದ್ದಿದೆ. ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.