ಕೂಡಿಗೆ, ಜೂ. ೧೩: ಕುಶಾಲನಗರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ ಗ್ರಾಮಗಳಲ್ಲಿ ಕೈಗೊಂಡಿರುವ ವಿವಿಧ ಸ್ವಚ್ಛ ಭಾರತ ಯೋಜನೆಯ ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಮಟ್ಟದಲ್ಲಿ ತಂಡಗಳನ್ನು ರಚನೆ ಮಾಡಿದ್ದು, ಅದರಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿಗಳ ಪರಿಶೀಲನೆ ಕಾರ್ಯ ನೆಡೆಯುತ್ತಿದೆ.

ತಾಲೂಕು ವ್ಯಾಪ್ತಿಯ ಕೂಡಿಗೆ, ಕೂಡುಮಂಗಳೂರು, ಹೆಬ್ಬಾಲೆ, ತೊರೆ ನೂರು, ಶಿರಂಗಾಲ, ಗುಡ್ಡೆಹೊಸೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಮ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಸೇರಿದಂತೆ ತಾಲೂಕು ಪಂಚಾಯಿತಿ ಅಧಿಕಾರಿ ವರ್ಗದವರು, ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಂಡದ ಮೂಲಕ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ವಚ್ಛ ಭಾರತ್ ಯೋಜನೆಯ ಅಡಿಯಲ್ಲಿ ಗ್ರಾಮೀಣ ಸ್ವಚ್ಛ ಸರ್ವೇಕ್ಷಣ ಮೌಲ್ಯಮಾಪನದ ಅಡಿಯಲ್ಲಿ ಸ್ವಚ್ಛತಾ ಸಂಕೀರ್ಣ, ಸೊಪೀಟ್, ಡ್ರೆöÊನೇಜ್, ನಿರ್ಮಾಣಗೊಂಡಿರುವ ಶೌಚಾಲ ಯಗಳ ಪರಿಶೀಲನೆ ನಡೆಸುವ ಕಾರ್ಯ ತಂಡದವರು ಭಾಗವಹಿಸಲಿದ್ದಾರೆ.