ಮಡಿಕೇರಿ, ಜೂ.೧೩: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ನಾತಕೋತ್ತರ ಕೇಂದ್ರ, ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ, ಸೋಮ ವಾರಪೇಟೆ ತಾಲ್ಲೂಕು ಆರೋಗ್ಯಾ ಧಿಕಾರಿ ಕಚೇರಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಡಗು ಶಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಕುಶಾಲನಗರ ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ವಾಣಿಜ್ಯೋ ದ್ಯಮಿಗಳ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯು ತಾ. ೧೪ ರಂದು ಬೆಳಗ್ಗೆ ೧೧ ಗಂಟೆಗೆ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾನಿಲಯದ ಸ್ನಾತ ಕೋತ್ತರ ಕೇಂದ್ರದಲ್ಲಿ ನಡೆಯಲಿದೆ.