ಕುಶಾಲನಗರ, ಜೂ.೧೪: ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಅಕ್ರಮ ಗಾಂಜಾ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಓರ್ವನನ್ನು ವಿಚಾರಣೆಗೆ ಒಳಪಡಿಸುವುದರೊಂದಿಗೆ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕುಶಾಲನಗರ ಸುತ್ತಮುತ್ತ ವ್ಯಾಪ್ತಿಯ ನದಿ ತಟದಲ್ಲಿ ಕೆಲವು ಯುವಕರು ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣಾಧಿಕಾರಿ ರವೀಂದ್ರ ಅವರ ನೇತೃತ್ವದಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿದ್ದಾರೆ.

ಈ ಸಂದರ್ಭ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಓರ್ವ ಯುವಕನನ್ನು ಸೇರಿದಂತೆ ಮಾರುತಿ- ೮೦೦ ಕಾರು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.