ಮಡಿಕೇರಿ, ಜೂ. ೧೫: ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಮತ್ತು ನೆಹರು ಯುವ ಕೇಂದ್ರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬAಧಿಸಿದAತೆ ವಿವಿಧ ಸ್ಪರ್ಧೆಯ ಜೊತೆಗೆ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ಜೆಸಿಐ ಭಾರತ ಕೊಡಮಾಡುವ ಗ್ರೀನ್ ಅವಾರ್ಡ್ ಪ್ರಶಸ್ತಿಯನ್ನು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್ ಅವರಿಗೆ ಜೆಸಿ ಅಧ್ಯಕ್ಷೆ ರುಬೀನಾ ಎಂ.ಎ. ನೀಡಿ ಗೌರವಿಸಿದರು.

ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರಕಾಶ್ ವಹಿಸಿದ್ದರು. ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಅರಿವನ್ನು ಮೂಡಿಸಿದರು. ಜೆಸಿ ಪ್ರಕಾಶ್ ಕೆ.ಎ., ವಿನುತ ಸುದೀಪ್, ಶಿಕ್ಷಕರಾದ ಮಂಜು, ನಾಗೇಂದ್ರ, ದಿನೇಶ್, ದೊಡ್ಡಯ್ಯ ಮತ್ತು ಜಗದೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.