ವೀರಾಜಪೇಟೆ, ಜೂ. ೧೫: ವೀರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ಯಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ದೇವಣಗೇರಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆಯಿತು.
ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜು ಆರೋಗ್ಯ ಶಿಬಿರವನ್ನು ಉದ್ಘಾಟಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯ ನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ನರೇಗಾ ಕೂಲಿಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಯಿತು.
ಆರೋಗ್ಯ ಶಿಬಿರದಲ್ಲಿ ರಕ್ತ ಪರೀಕ್ಷೆ, ಮಧುಮೇಹ, ರಕ್ತದೊತ್ತಡ, ಟಿಬಿ, ಕಣ್ಣಿನ ಪರೀಕ್ಷೆ, ಹೃದಯ ಸಂಬAಧಿತ ತಪಾಸಣೆ ಮಾಡಲಾಯಿತು. ಒಟ್ಟು ೫೪ ಕೂಲಿ ಕಾರ್ಮಿಕರು ಆರೋಗ್ಯ ತಪಾಸಣೆಗೆ ಒಳಗಾದರು.
ಈ ಸಂದರ್ಭ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೂಕೊಂಡ ಉಮೇಶ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಟಿ.ಡಿ. ವಾಸು, ಕಾಂತಿ, ಚಂದ್ರಕಲಾ, ಕಿರಣ್, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.