ಮಡಿಕೇರಿ, ಜೂ. ೧೫: ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಡಿಕೇರಿ ಉಪ ವಿಭಾಗದ ಕುಂದಚೇರಿ ಗ್ರಾಮದ ಚೆಟ್ಟಿಮಾನಿ ಸಮುದಾಯ ಭವನ, ಗೋಣಿಕೊಪ್ಪಲು ಉಪ ವಿಭಾಗದ ಹೊಸೂರು ಗ್ರಾ.ಪಂ. ಸಭಾಂಗಣ, ವೀರಾಜಪೇಟೆ ಉಪ ವಿಭಾಗದ ಹಚ್ಚಿನಾಡು ಸರ್ಕಾರಿ ಪ್ರಾಥಮಿಕ ಶಾಲೆ, ಹೆಗ್ಗಳ ಹಿರಿಯ ಪ್ರಾಥಮಿಕ ಶಾಲೆ, ಬೇಟೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕುಶಾಲನಗರ ಉಪ ವಿಭಾಗದ ಕೂಡಿಗೆ ಗ್ರಾಮದ ತೊರೆನೂರು ಗ್ರಾ.ಪಂ. ಸಭಾಂಗಣ ಹಾಗೂ ಸೋಮವಾರಪೇಟೆ ಉಪ ವಿಭಾಗದ ಬಜೆಗುಂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಾ. ೧೭ ರಂದು ಬೆಳಿಗ್ಗೆ ೧೧ ಗಂಟೆಯಿAದ ವಿದ್ಯುತ್ ಅದಾಲತ್ ನಡೆಯಲಿದೆ. ಈ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.