ಕೊಡ್ಲಿಪೇಟೆ, ಜೂ. ೧೫: ಸಮೀಪದ ಚಿಕ್ಕಭಂಡಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಉದ್ಘಾಟನಾ ಕಾರ್ಯಕ್ರಮ ಹಲವು ಧಾರ್ಮಿಕ ಕೈಂಕರ್ಯಗಳೊAದಿಗೆ ನೆರವೇರಿತು.
ಸಭಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಮಂಥರ್ ಗೌಡ ಅವರು, ದೇವಾಲಯಗಳು ನಿರ್ಮಾಣಗೊಂಡರಷ್ಟೇ ಸಾಲದು; ಅವುಗಳನ್ನು ವ್ಯವಸ್ಥಿತವಾಗಿ ಮುಂದುವರೆಸಿಕೊAಡು ಹೋಗಬೇಕು. ಇದಕ್ಕೆ ಗ್ರಾಮಸ್ಥರ ಸಹಕಾರವೂ ಬೇಕು ಎಂದು ಅಭಿಪ್ರಾಯಿಸಿದರು.
ದೇವಾಲಯ ನಿರ್ಮಾಣಕ್ಕೆ ಈ ಹಿಂದೆಯೂ ಅಗತ್ಯ ಸಹಕಾರ ನೀಡಲಾಗಿದೆ. ಮುಂದೆಯೂ ಸಹಕರಿಸಲಾಗುವುದು. ಇದೀಗ ಶಾಸಕನಾಗಿ ಆಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ರಾಜಕೀಯ ಮಾಡದೆ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು.
ದೇವಸ್ಥಾನ ಸಮಿತಿ ಪ್ರಮುಖರಾದ ಪುಟ್ಟರಾಜು ಮಾತನಾಡಿ, ಸುತ್ತಮುತ್ತಲಿನ ೧೮ ಗ್ರಾಮಗಳ ಭಕ್ತರ ಸಹಕಾರದಿಂದ ದೇವಸ್ಥಾನ ನಿರ್ಮಿಸಲಾಗಿದೆ. ಐದು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ ಜಾತ್ರಾ ಮಹೋತ್ಸವಕ್ಕೆ ಅನುದಾನ ನೀಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.
ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಆರ್. ಚಂದ್ರಶೇಖರ್, ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಬಿ. ಗಿರೀಶ್, ವೆಂಕಟೇಶ್ ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ತೇಜುಕುಮಾರ್, ರಾಮು, ಔರಂಗಜೇಬ್, ಪಾಲಾಕ್ಷ, ಜನಾರ್ದನ್, ಚೇತನ್, ಪ್ರೇಮ್ಕುಮಾರ್ ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.